VIDEO| ಬೈಕ್​ ಶೋರೂಂನಲ್ಲಿ ಬೆಂಕಿ; 300ಕ್ಕೂ ಹೆಚ್ಚು ವಾಹನ ಅಗ್ನಿಗಾಹುತಿ

TVS Showroom
Published on

ವಿಜಯವಾಡ: ಟಿವಿಎಸ್​ ಬೈಕ್​​ ಶೋರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 300ಕ್ಕೂ ಹೆಚ್ಚು ವಾಹನ​ಗಳು ಸುಟ್ಟು ಕರಕಲಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ನಡೆದಿದೆ.

ಗುರುವಾರ ಬೆಳಗಿನ ಜಾವ 5 ಘಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಒಬ್ಬರು ಚೆನ್ನೈ-ಕಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿವಿಎಸ್​ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಶೋರೂಂನಲ್ಲಿ ಎಲೆಕ್ಟ್ರಿಕ್​ ವಾಹನಗಳು ಇದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲೇ ಹರಡಿದೆ. ಶೋರೂಂ, ಗೋಡೌನ್​ ಹಾಗೂ ಸರ್ವೀಸ್​ ಸೆಂಟರ್​ ಒಂದೇ ಕಡೆ ಇದ್ದ ಕಾರಣ ಕಟ್ಟಡದಲ್ಲಿ ಹೆಚ್ಚಿನ ವಾಹನಗಳಿದ್ದವು. ಘಟನೆಯಲ್ಲಿ 300ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳದಲ್ಲಿ ಐದು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net