More

    30,000 ಇ-ಶ್ರಮ್ ಕಾರ್ಡ್ ಉಚಿತ ವಿತರಣೆ


    ಧರ್ವಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಧನಂಜಯ್ ಮಾಹಿತಿ


    ಹುಣಸೂರು: ಧರ್ವಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನಲ್ಲಿ 30 ಸಾವಿರಕ್ಕೂ ಅಧಿಕ ಇ-ಶ್ರಮ್ ಕಾರ್ಡ್ ಅನ್ನು ಉಚಿತವಾಗಿ ಮಾಡಿಕೊಡಲಾಗಿದೆ ಎಂದು ಯೋಜನೆಯ ತಾಲೂಕು ಯೋಜನಾಧಿಕಾರಿ ಧನಂಜಯ್ ತಿಳಿಸಿದರು.

    ನಗರದ ಪೌರಕಾರ್ಮಿಕರ ಕಾಲನಿಯ ಆದಿಶಕ್ತಿ ಮಹಾಕಾಳಮ್ಮ ದೇವಾಲಯದ ಆವರಣದಲ್ಲಿ ಸೋಮವಾರ ಯೋಜನೆಯ ಸಾರ್ವಜನಿಕ ಸೇವಾ ಕೇಂದ್ರ ವತಿಯಿಂದ ಆಯೋಜಿಸಿದ್ದ ಸರ್ಕಾರಿ ಸೇವೆಗಳ ಕುರಿತಾದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ತಾಲೂಕಿನಲ್ಲಿ 33,529 ಆಯುಷ್ಮಾನ್ ಭಾರತ ಕಾರ್ಡ್ ಅನ್ನು ಉಚಿತವಾಗಿ ಒದಗಿಸಲಾಗಿದೆ. ಒಕ್ಕೂಟದ ಸದಸ್ಯರಿಗೆ ಅರಿವು ಮೂಡಿಸುವ ಕಾರ್ಯ ನಡೆಸಲಾಗಿದೆ. ಇದೀಗ ಪೌರಕಾರ್ಮಿಕರ ಕಾಲನಿಯಲ್ಲಿ ಯೋಜನೆಯ ಸೇವಾ ಕೇಂದ್ರದ ಸದಸ್ಯರು ಮನೆಮನೆಗೆ ಭೇಟಿ ನೀಡಿ ಸೇವೆಗಳನ್ನು ಒದಗಿಸಲಿದ್ದಾರೆ. ನಾಗರಿಕರು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕೋರಿದರು.

    ನಗರಸಭಾ ಸದಸ್ಯೆ ರಾಣಿ ಪೆರುಮಾಳ್ ಮಾತನಾಡಿದರು. ಯೋಜನೆಯ ಸಾಮಾಜಿಕ ಸೇವಾ ಕೇಂದ್ರದ ತಾಲೂಕು ನೋಡಲ್ ಅಧಿಕಾರಿ ಶಿವಕುಮಾರ್, ವಲಯ ಮೇಲ್ವಿಚಾರಕಿ ರಾಣಿ, ರವಿ, ನಿವೇದಿತಾ, ಒಕ್ಕೂಟದ ಅಧ್ಯಕ್ಷೆ ರಾಜಮ್ಮ ಮತ್ತು ಸದಸ್ಯರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts