More

    856 ಮಂದಿ ಕೋವಿಡ್ ಮುಕ್ತ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 307 ಕರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸೋಂಕು ದೃಢಪಟ್ಟವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
    ಪಾಸಿಟಿವ್ ಪ್ರಕರಣಗಳ ಪೈಕಿ ಮಂಗಳೂರು ತಾಲೂಕಿನಲ್ಲಿ ಗರಿಷ್ಠ 197 ಇದೆ. ಉಳಿದಂತೆ ಬಂಟ್ವಾಳ 57, ಸುಳ್ಯ 17, ಪುತ್ತೂರು ಮತ್ತು ಬೆಳ್ತಂಗಡಿ ತಲಾ 14 ಮತ್ತು ಇತರ ಜಿಲ್ಲೆಗಳ ಪ್ರಕರಣಗಳು 8. ಸೋಂಕಿತರಲ್ಲಿ 124 ಪ್ರಕರಣಗಳ ಮೂಲ ಪತ್ತೆಯಾಗಿಲ್ಲ. ಐಎಲ್‌ಐ 130 ಇದೆ.

    242 ಮಂದಿ ಗುಣಮುಖ: ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 242 ಮಂದಿ ಶುಕ್ರವಾರ ಕರೊನಾ ಸೋಂಕಿನಿಂದ ಮುಕ್ತರಾಗಿ ಗುಣಮುಖರಾಗಿದ್ದಾರೆ. ಇವರಲ್ಲಿ 7 ಮಂದಿ ಕೋವಿಡ್ ಕೇರ್ ಸೆಂಟರ್, 175 ಮಂದಿ ಮನೆಯಲ್ಲಿ ಹಾಗೂ 60 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು.
    ಇಲ್ಲಿವರೆಗೆ ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 8,378 ಆಗಿದೆ. 6,115 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 256 ಮಂದಿ ಮೃತಪಟ್ಟಿದ್ದಾರೆ.

    ಕಾಸರಗೋಡಿನ ಇನ್ನಿಬ್ಬರು ಸಾವು
    ಕಾಸರಗೋಡು: ಜಿಲ್ಲೆಯ 49 ಮಂದಿ ಒಳಗೊಂಡಂತೆ ಕೇರಳದಲ್ಲಿ ಶುಕ್ರವಾರ 1,569 ಮಂದಿಗೆ ಕೋವಿಡ್-19 ಸೋಂಕು ತಗುಲಿದೆ. ಇವರಲ್ಲಿ 56 ಮಂದಿ ವಿದೇಶದಿಂದ, 136 ಮಂದಿ ಇತರ ರಾಜ್ಯಗಳಿಂದ ಆಗಮಿಸಿದವರು. ರಾಜ್ಯದಲ್ಲಿ ಕೋವಿಡ್ ಬಾಧಿಸಿ ಮೃತಪಟ್ಟವರ ಸಂಖ್ಯೆ ಒಟ್ಟು 139ಕ್ಕೇರಿದೆ. ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 21ಕ್ಕೆ ಏರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts