More

    31ರೊಳಗೆ ಹೆಸರು ನೋಂದಾಯಿಸಿ

    ರಾಮದುರ್ಗ: ತಾಲೂಕಿನ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಅದರ ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲರಾಗಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

    ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಸರ್ಕಾರದ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಸದ್ಬಳಕೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಜಾಗೃತಿ ಮೂಡಿಸಬೇಕು.

    ದೇಶಕ್ಕೆ ಅನ್ನ ನೀಡುವ ರೈತನ ಪರವಾಗಿ ಕೆಲಸ ಮಾಡಿದ ಸಂತೃಪ್ತಿ ನನಗಿದೆ ಎಂದರು. ಪ್ರತಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಸುಮಾರು 15 ಕ್ವಿಂಟಾಲ್ ಕಡಲೆಯನ್ನು 5,335 ರೂ.ದರದಲ್ಲಿ ಪಟ್ಟಣದ ರಾಮದುರ್ಗ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘದಿಂದ ಸರ್ಕಾರದ ಏಜೆನ್ಸಿ ಮೂಲಕ ಖರೀದಿ ಮಾಡಲಾಗುತ್ತಿದೆ. ಮಾ. 31ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ಎಂ. ಜಗತಾಪ, ಸದಸ್ಯರಾದ ಕುಬೇರಗೌಡ ಪಾಟೀಲ, ಮೆಗುಂಡಪ್ಪ ಕೋಣಿಮನಿ, ರುದ್ರಗೌಡ ಪಾಟೀಲ, ಟಿಎಪಿಸಿಎಂಎಸ್ ಕಾರ್ಯದರ್ಶಿ ತುಳಜಪ್ಪ ನಡಗಡ್ಡಿ, ೆಡರೇಷನ್ ಸಹಾಯಕ ಮಹಾದೇವ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts