More

    31 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

    ಅರಕಲಗೂಡು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘದ ಸದಸ್ಯರ ಮಕ್ಕಳು ವೃತ್ತಿಪರ ಶಿಕ್ಷಣಕ್ಕಾಗಿ 31 ವಿಧ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದು ಎಂದು ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದರು.

    ಪಟ್ಟಣದ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ಮಕ್ಕಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು. ಮೂರು ವರ್ಷದೊಳಗಿನ ಕೋರ್ಸ್‌ಗಳಿಗೆ ಪ್ರತಿ ತಿಂಗಳು 400 ರೂ. ಹಾಗೂ ಮೂರು ವರ್ಷಕ್ಕಿಂತ ಮೇಲ್ಪಟ್ಟ ಕೋರ್ಸ್‌ಗಳಿಗೆ ವಿದ್ಯಾಭ್ಯಾಸ ಪೂರ್ಣಗೊಳ್ಳುವ ತನಕ ಪ್ರತಿ ತಿಂಗಳು ಒಂದು ಸಾವಿರ ರೂ. ನೀಡಲಾಗುವುದು ಎಂದರು.

    ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ ಸದಸ್ಯರಾದ ರಮೇಶ್ ವಾಟಾಳ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಯೋಜನಾಧಿಕಾರಿ ಎಸ್.ಬಿ. ಜಿನ್ನಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts