More

    ಹುಂಡಿಯಲ್ಲಿ 31.35 ಲಕ್ಷ ರೂ. ಕಾಣಿಕೆ

    ಸೊರಬ:ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಗುರುವಾರ ಮಾಡಿದ್ದು 31,35,360 ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 25,08,680 ರೂ. ಸಂಗ್ರಹವಾಗಿತ್ತು.
    ಹುಂಡಿ ಎಣಿಕೆ ಕಾರ್ಯವನ್ನು ಸಾಗರದ ನೂತನ ಉಪವಿಭಾಗಾಧಿಕಾರಿ ಆರ್.ಯತೀಶ್ ಪರಿಶೀಲಿಸಿದರು. ಭಕ್ತರ ಮೂಲಕ ದೇವಾಲಯಕ್ಕೆ ಕಾಣಿಕೆ ರೂಪದಲ್ಲಿ ಸಾಕಷ್ಟು ದವಸ ಧಾನ್ಯಗಳು ಬರುತ್ತದೆ. ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ದೇವಿಯ ದರ್ಶನಕ್ಕೆ ಬರುವಂತಹ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಬೇಕು. ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಜತೆಗೆ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅನುಗುಣವಾಗಿ ಬೇಕಾಗುವ ಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದರು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದರು. ಯತೀಶ್ ಅವರನ್ನು ತಹಸೀಲ್ದಾರ್ ಹುಸೇನ್ ಸರಕಾವಸ್ ಹಾಗೂ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಸನ್ಮಾನಿಸಿದರು.
    ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮರಾ ಆಳವಡಿಸಲಾಗಿತ್ತು. ಶಿರಸ್ತೇದಾರ್ ಎಸ್. ನಿರ್ಮಲಾ ಪ್ರಭಾಕರ್, ವಿಷಯ ನಿರ್ವಾಹಕಿ ಎಂ.ಶೃತಿ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಾಲಯ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts