More

    ಭರತ್ ರೆಡ್ಡಿ ಮನೆ ಮೇಲೆ ಇಡಿ ದಾಳಿ ವೇಳೆ 31ಲಕ್ಷ ರೂ. ವಶ

    ಬಳ್ಳಾರಿ : ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಲೆಕ್ಕಕ್ಕೆ ಸಿಗದ 31 ಲಕ್ಷ ರೂ.ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿದೆ.

    ಬಳ್ಳಾರಿ ನಗರದಲ್ಲಿರುವ ಭರತ್‌ರೆಡ್ಡಿ ಹಾಗೂ ಅವರ ತಂದೆ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಮತ್ತು ಸಂಬಂಧಿಕರ ಮನೆ ಮೇಲೆ ಫೆ.10 ಮತ್ತು 11ರಂದು ಸತತ ಎರಡು ದಿನಗಳ 41 ಗಂಟೆಗಳ ಕಾಲ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.

    ಇ.ಡಿ ಅಧಿಕಾರಿಗಳ ಶೋಧ ಕಾರ್ಯವು ಭಾನುವಾರ ರಾತ್ರಿ 11.30ಕ್ಕೆ ಅಂತ್ಯಗೊಂಡಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)2002ರ ಅಡಿಯಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಶಾಸಕ ಭರತ್ ರೆಡ್ಡಿ ಅವರಿಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಶೋಧದ ವೇಳೆ ಮಹತ್ವದ ದಾಖಲೆಗಳು, ಅವರ ವ್ಯವಹಾರಕ್ಕೆ ಸಂಬಂಧಿಸಿದ ಕಾಗದ ಪತ್ರಗಳು, ಸ್ಥಿರ ಮತ್ತು ಚರ ಆಸ್ತಿಗಳ ವಿವರಗಳನ್ನು ವಶಕ್ಕೆ ಪಡೆಯಲಾಗಿದೆ.

    ರತ್ನಬಾಬು ಹಾಗೂ ಭರತ್‌ರೆಡ್ಡಿ ಇನ್ನತರ ಸಂಬಂಧಿಕರ ನಡುವೆ ನಡೆದಿರುವ ಅಕ್ರಮ ವಹಿವಾಟುವಿನಲ್ಲಿ 31 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ತಿಳಿಸಿದೆ.

    ಅಲ್ಲದೆ ವಿಧಾನಸಭೆ ಚುನಾವಣೆ ವೇಳೆ ಭರತ್ ರೆಡ್ಡಿ ಅವರು ಸುಮಾರು 42 ಕೋಟಿ ರೂ. ಹಣವನ್ನು ಸಂಗ್ರಹಿಸಿ, ಕಾನೂನುಬಾಹಿರವಾಗಿ ಬಳಸಿಕೊಂಡಿದ್ದರು ಎಂದು ಇ.ಡಿ ಮಾಹಿತಿ ನೀಡಿದೆ. ಆರೋಪಿಸಿದೆ.

    ಭರತ್ ರೆಡ್ಡಿ ಅವರ ಸಹೋದರ ಶರತ್ ರೆಡ್ಡಿ ಎಂಬುವವರು ವಿದೇಶಿ ಮೂಲದ ಕಂಪನಿಗಳಲ್ಲಿ ರಹಸ್ಯ ಹೂಡಿಕೆ ಮಾಡಿದ್ದು, ಆರೋಪಿಗಳು ಬೇನಾಮಿಯಾಗಿ ಆಸ್ತಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅಲ್ಲದೆ ಸಂಬಂಧಿಕರ ಹೆಸರಿನಲ್ಲಿ ಬ್ಯಾಂಕ್‌ಗಳಿಂದ ಲೋನ್ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ಇ.ಡಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts