More

    313 ಜನರಿಂದ ಮತದಾನ


    ಚಾಮರಾಜನಗರ: ಜಿಲ್ಲೆಯಲ್ಲಿ ಮನೆಯಿಂದಲೇ ಮತದಾನ ಮಾಡಲು ಕೋರಿಕೆ ಸಲ್ಲಿಸಿದ್ದ 80 ವರ್ಷ ಮೇಲ್ಪಟ್ಟ 329 ಹಿರಿಯ ನಾಗರಿಕರು ಹಾಗೂ 313 ಅಂಗವಿಕಲ ಮತದಾರರ ಪೈಕಿ ಶನಿವಾರ 313 ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

    ಹನೂರು ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 50 ಹಿರಿಯ ನಾಗರಿಕರು, 25 ಅಂಗವಿಕಲರು ಮತ ಚಲಾಯಿಸಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 49 ಹಿರಿಯ ನಾಗರಿಕರು, 31 ಅಂಗವಿಕಲರು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 51 ಹಿರಿಯ ನಾಗರಿಕರು, 26 ಅಂಗವಿಕಲರು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 59 ಹಿರಿಯ ನಾಗರಿಕರು, 22 ಅಂಗವಿಕಲರು ಮತ ಚಲಾಯಿಸಿದ್ದಾರೆ.

    ಕೋರಿಕೆ ಅರ್ಜಿ ಸಲ್ಲಿಸಿ ನೋಂದಣಿಯಾದ ಅವಧಿಯ ಬಳಿಕ 8 ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಮನೆಯಲ್ಲಿ ಲಭ್ಯವಿಲ್ಲದೆ ಹೊರಗೆ ತೆರಳಿದ್ದಾರೆ. ಮೂವರು ನಿರಾಕರಿಸಿದ್ದಾರೆ. ಉಳಿದ ಎಂಟು ಜನರು ಮೇ 6ರಂದು ಮತ್ತೊಮ್ಮೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

    ಗೌಪ್ಯ ಮತದಾನ: ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಮನೆಯಿಂದಲೇ ಮತದಾನ ಮಾಡಲು ಕೋರಿಕೆ ಸಲ್ಲಿಸಿದ್ದ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರಿಗೆ ಮನೆಯಿಂದಲೇ ಗೌಪ್ಯವಾಗಿ ಮತದಾನ ಮಾಡುವ ಪ್ರಕ್ರಿಯೆ ಸುವ್ಯವಸ್ಥಿತವಾಗಿ ನಡೆದಿದೆ.
    ವಿಧಾನಸಭೆಗೆ ಮೇ 10ರಂದು ನಡೆಯಲಿರುವ ಚುನಾವಣೆಯ ಭಾಗವಾಗಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಇದೇ ಮೊದಲ ಬಾರಿಗೆ ಮನೆಯಿಂದಲೇ ಬ್ಯಾಲೆಟ್ ಮತದಾನ ನಡೆಯಿತು.

    ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ನಡೆಯಿತು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನೇಮಕವಾಗಿದ್ದ ಮತದಾನ ಅಧಿಕಾರಿ, ಮೈಕ್ರೋ ಅಬ್ಸರ್‌ವರ್, ಪೊಲೀಸ್ ಸಿಬ್ಬಂದಿ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗೆ ತೆರಳಿ ಗೌಪ್ಯ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ವಿಧಾನಸಭಾ ಕ್ಷೇತ್ರವಾರು ರೂಟ್ ಮ್ಯಾಪ್ ತಯಾರಿಸಲಾಗಿತ್ತು. ಅದರಂತೆಯೇ ಸೆಕ್ಟರ್ ಅಧಿಕಾರಿಗಳೊಡನೆ ನಿಯೋಜಿತರಾಗಿದ್ದ ಚುನಾವಣಾ ಸಿಬ್ಬಂದಿ ರೂಟ್ ಮ್ಯಾಪ್ ಪ್ರಕಾರ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಕರ್ತವ್ಯದಲ್ಲಿ ಪಾಲ್ಗೊಂಡರು. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಡಮೋಳೆ ಗ್ರಾಮದಲ್ಲಿ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ವ್ಯವಸ್ಥೆಗಳನ್ನು ವೀಕ್ಷಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts