More

    32 ನಿಲ್ದಾಣಗಳಲ್ಲಿ ಛಾಯಾಚಿತ್ರ ಪ್ರದರ್ಶನ

    ಹುಬ್ಬಳ್ಳಿ: ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ 32 ನಿಲ್ದಾಣಗಳಲ್ಲಿ ದೇಶ ವಿಭಜನೆಯ ಕರಾಳ ದಿನಗಳನ್ನು ನೆನಪಿಸುವ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ತಿಳಿಸಿದರು.

    ಭಾನುವಾರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಹುತಾತ್ಮ ಭಗತ ಸಿಂಗ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸುಮಾರು 700 ನಿಲ್ದಾಣಗಳಲ್ಲಿ ಈ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಇಂದಿನಿಂದ ಕೆಲ ದಿನಗಳ ಕಾಲ ಸಾರ್ವಜನಿಕರು ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ ಎಂದರು.

    ದೇಶಾದ್ಯಂತ ಆ. 14 ಅನ್ನು ವಿಭಜನೆಯ ಕರಾಳತೆಯನ್ನು ನೆನಪಿಸುವ ದಿನವನ್ನಾಗಿ ಆಚರಿಸಲಾಗುತ್ತಿದೆ. ದೇಶ ವಿಭಜನೆಗೊಂಡಾಗ ಲಕ್ಷಾಂತರ ಜನರು ಅನುಭವಿಸಿದ ನೋವು, ಹಿಂಸೆ ಹಾಗೂ ತೊಂದರೆಗಳನ್ನು ಇಂದಿನ ಯುವಕರು ಅರ್ಥೈಸಿಕೊಳ್ಳುವುದು ಅಗತ್ಯವಿದೆ ಎಂದರು.

    ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ನೈಋತ್ಯ ರೈಲ್ವೆ ಮಹಿಳಾ ಹಿತರಕ್ಷಣಾ ಸಂಸ್ಥೆಯ ಅಧ್ಯಕ್ಷೆ ಡಾ. ವಂದನಾ ಶ್ರೀವಾಸ್ತವ, ಹಿರಿಯ ಅಧಿಕಾರಿಗಳಾದ ಹರಿತಾ ಎಸ್., ಕೆ. ಆಸಿಫ್ ಹಫೀಜ್, ಅನೀಸ್ ಹೆಗಡೆ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts