ಢಾಕಾ: ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಸಂಘಟನೆಗಳು ಕರೆ ಘೋಷಿಸಿರುವ ಅಸಹಕಾರ ಚಳುವಳಿಯ ಮೊದಲ ದಿನ ಭಾನುವಾರ ಪ್ರತಿಭಟನಾಕಾರರ ಮತ್ತು ಅಡಳಿತ ಅವಾಮಿ ಲೀಗ್ ಬೆಂಬಲಿಗರ ನಡುವಿನ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದು 32 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಪಿಎಸ್ಐ ಪರಶುರಾಮ್ ಸಾವಿನ ಹಿಂದೆ ಕಾಂಗ್ರೆಸ್ ಶಾಸಕರ ಕೈವಾಡ ಇಲ್ಲ: ಸಚಿವ ಎಂ.ಬಿ ಪಾಟೀಲ್
ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಇಂದು ಬೆಳಗ್ಗೆ ಪ್ರತಿಭಟನಾಕಾರರು ಅಸಹಕಾರ ಚಳುವಳಿ ಆರಂಭಿಸಿದ್ದರು. ಇದಕ್ಕೆ ಅವಾಮಿ ಲೀಗ್, ಛಾತ್ರಾ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿತ್ತು ಇದರಿಮದ ಸಂಘರ್ಷ ತೀವ್ರ ತೀವ್ರಗೊಂಡಿದೆ. ಘರ್ಷಣೆಯಲ್ಲಿ ಬಾಂಗ್ಲಾದೇಶದ 13 ಜಿಲ್ಲೆಗಳಲ್ಲಿ ಈವರೆಗೆ 32 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಫೆನಿಯಲ್ಲಿ ಐದು, ಭೋಲಾ, ಮುಶಿಗಂಜ್, ಬೊಗೊರಾ, ಮಗುರಾ, ರಂಗಪುರದಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ. ಪಾಬ್ನಾ ಇಬ್ಬರು, ಕೊಮಿಲ್ಲ, ಜೋಯ್ಪುರ್ಹಟ್,ಢಾಕಾ ಮತ್ತು ಬಾರಿಸಾಲ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
ಇಂದು ಸಂಜೆಯಿಂದ ದೇಶದಾದ್ಯಂತಯ ಅನಿರ್ದಿಷ್ಟಾವಧಿಗೆ ಕರ್ಫ್ಯೂ ವಿಧಿಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಮೆಟಾದ ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಮೆಸೆಂಜರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಸ್ಥಗಿತಕ್ಕೆ ಸೂಚಿಸಲಾಗಿದೆ. 4ಜಿ ಇಂಟರ್ನೆಟ್ ಸ್ಥಗಿತಕ್ಕೂ ಟೆಲಿಕಾಂ ಕಂಪನಿಗಳಿಗೆ ಸೂಚಿಸಲಾಗಿದೆ. ಈ ನಡುವೆ ಸಂಘರ್ಷದ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪ್ರಧಾನಿ ಶೇಖಾ ಹಸೀನಾ ಅವರು ಭದ್ರತಾ ವ್ಯವಹಾರಗಳ ಕುರಿತಾದ ರಾಷ್ಟ್ರೀಯ ಸಮಿತಿ ಸಭೆ ನಡೆಸಿದ್ದಾರೆ.