ಚಾಕು ತೋರಿಸಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

Rape1
Published on

ಮುಂಬೈ: ಮಹಾರಾಷ್ಟರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ 32 ವರ್ಷದ ಮಹಿಳೆಗೆ ಚಾಕು ತೋರಿಸಿ ಬೆದರಿಸಿದ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ತುಳಿಂಜ್ ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 70 (1) ಮತ್ತು 351 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಜಿತೇಂದ್ರ ಯಾದವ್ ಮತ್ತು ಅವಿ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಬಂಧನಕ್ಕೆ ತಲಾಷ್​​ ನಡೆಸಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ: ಇದೇ ನಲಸೋಪಾರಾದಲ್ಲಿ ಸೆ.11ರಂದು ನಡೆದಿರುವ ಪ್ರತ್ಯೇಕ ಘಟನೆಯಲ್ಲಿ ಗಣೇಶೋತ್ಸವ ವೀಕ್ಷಿಸಿ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

10 ವರ್ಷದ ಬಾಲಕಿ ತನ್ನ ಕುಟುಂಬದೊಂದಿಗೆ ನಲಸೋಪಾರ ಪೂರ್ವದ ಶಿರಡಿನಗರ ಪ್ರದೇಶದಲ್ಲಿ ಗಣೇಶ ಬರುವುದನ್ನು ನೋಡಲು ಹೋಗಿದ್ದಳು. ಬಳಿಕ ಅಲ್ಲಿಂದ ಮನೆಗೆ ವಾಪಸಾಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಮನೆಯ ಸಮೀಪ ರಸ್ತೆಯಲ್ಲಿ ನಿಲ್ಲಿಸಿ ನಿರ್ಜನ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net