More

    ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಜೆಟ್​​ನಲ್ಲಿ 32,259 ಕೋಟಿ ರೂ.ಮೀಸಲು; ರೈತರ ಸುಸ್ತಿ ಬಡ್ಡಿ ಮನ್ನಾಕ್ಕೆ 466 ಕೋಟಿ ರೂ.

    ಬೆಂಗಳೂರು: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​ (PCARD), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ (ಡಿಸಿಸಿ) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ನೀಡಲಾಗಿರುವ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳ ಮೇಲಿನ ಸುಸ್ತಿ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದ್ದು, ಅದಕ್ಕಾಗಿ 466 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ, ಇದರಿಂದ 92 ಸಾವಿರ ರೈತರಿಗೆ ಪ್ರಯೋಜನ ಆಗಲಿದೆ ಎಂದು ಯಡಿಯೂರಪ್ಪನವರು ತಿಳಿಸಿದರು.

    ಅಡಕೆ ಬೆಳೆಗಾರರ ಪ್ರಾಥಮಿಕ/ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ರೈತರಿಗೆ ನೀಡಲಾಗುವ 2 ಲಕ್ಷ ರೂ.ವರೆಗಿನ ದೀರ್ಘಾವಧಿ ಸಾಲಕ್ಕೆ ಶೇ.5ರಷ್ಟು ಬಡ್ಡಿದರ ವಿನಾಯಿತಿ ನೀಡಲಾಗುವುದು ಎಂದು ಸಿಎಂ ಘೋಷಿಸಿದರು.

    ಸಣ್ಣ ಮತ್ತು ಅತಿ ಸಣ್ಣ ಕೃಷಿಕರನ್ನು ಸಂಘಟಿಸಲು, ಅವರು ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆಗೆ ನೀಡಲು ಕೃಷಿ ಉತ್ಪಾದಕರ ಸಂಸ್ಥೆ (FPO) ನೀತಿಯನ್ನು ಘೋಷಿಸಲಾಗಿದೆ. ಈ ಸಂಸ್ಥೆ ಮೂಲಕ ಮುಂದಿನ 5 ವರ್ಷಗಳಲ್ಲಿ ಐದು ಲಕ್ಷ ಕೃಷಿಕರನ್ನು ಸಂಘಟಿಸುವ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 ಎಫ್​ಪಿಒಗಳನ್ನು ರಚಿಸಲಿದ್ದು, ಈ ಎಫ್​ಪಿಒಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ 8 ಕೋಟಿ ರೂ.ನೆರವು ನೀಡಲಾಗುವುದು ಎಂದು ಹೇಳಿದರು.

    ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ವಿಳಂಬವಾದಾಗ ರೈತರಲ್ಲಿ ಸಕಾಲ ಹಣ ಪಾವತಿ ಮಾಡಲು ಅನುಕೂಲವಾಗುವಂತೆ ಸ್ಥಾಪಿಸಲಾಗಿರುವ ಆವರ್ತ ನಿಧಿಯ ಮೊತ್ತವನ್ನು ಅವಶ್ಯಕತೆಗೆ ಅನುಗುಣವಾಗಿ 2,000 ಕೋಟಿ ರೂವರೆಗೆ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಹಾಗೇ 2020-21 ಸಾಲಿನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಒಟ್ಟಾರೆಯಾಗಿ 32,259 ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts