Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

3266 ಫಲಾನುಭವಿಗಳಿಗಿಲ್ಲ ಅನಿಲಭಾಗ್ಯ

Tuesday, 10.07.2018, 3:56 AM       No Comments

ಮಾಗಡಿ: ಅನಿಲ ಭಾಗ್ಯ ಯೋಜನೆಯಡಿ 6 ತಿಂಗಳ ಹಿಂದೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳಿಗೆ ಇದುವರೆಗೂ ಸಿಲಿಂಡರ್ ಮತ್ತು ಸ್ಟೌ ವಿತರಣೆಯಾಗಿಲ್ಲ.

ತಾಲೂಕಿನಲ್ಲಿ 4800 ಫಲಾನುಭವಿಗಳನ್ನು ಆಹಾರ ಇಲಾಖೆ ಗುರುತಿಸಿದ್ದು, ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತಂಡ 3266 ಫಲಾನುಭವಿಗಳನ್ನು ಆಯ್ಕೆ ಮಾಡಿತ್ತು. ಸೋಲೂರು ಹೋಬಳಿ ನೆಲಮಂಗಲ ಕ್ಷೇತ್ರಕ್ಕೆ ಬರುವುದರಿಂದ ಅಲ್ಲಿನ ಶಾಸಕರು ಫಲಾನುಭವಿಗಳ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಆ ಹೋಬಳಿಯ ಫಲಾನುಭವಿಗಳ ಪಟ್ಟಿ ಇನ್ನೂ ಸಿದ್ಧವಾಗಿಲ್ಲ ಎನ್ನಲಾಗಿದೆ. ಆದರೆ ಪಟ್ಟಿ ಸಿದ್ಧವಾದ ಫಲಾನುಭವಿಗಳಿಗೆ ಸರ್ಕಾರ ಬದಲಾದರೂ ಅಡುಗೆ ಅನಿಲ ಸಿಗದಿರುವುದು ವಿಪರ್ಯಾಸವೇ ಸರಿ ಎಂದು ಪುರಸಭೆ ಮಾಜಿ ಅಧ್ಯಕ್ಷ ನಯಾಜ್ ಬೇಸರಿಸಿದ್ದಾರೆ.

ಉಜ್ವಲ ಯೋಜನೆಗೆ ಸಮಸ್ಯೆಯಿಲ್ಲ:

ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಒದಗಿಸುತ್ತಿದ್ದು, ಈ ಯೋಜನೆಗೆ ಯಾವುದೇ ಸಮಸ್ಯೆಯಾಗುತ್ತಿಲ್ಲ. ಎಸ್​ಸಿ, ಎಸ್​ಟಿ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಇತರೆ ಸಮುದಾಯದ ಕುಟುಂಬಗಳಿಗೆ ಒಂದು ಸ್ಟೌ ಮತ್ತು ಸಿಲಿಂಡರ್ ನೀಡಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರು, ಕಾಡಂಚಿನ ಗ್ರಾಮಸ್ಥರುಗಳಿಗೂ ಯೋಜನೆಯಡಿ ಅಡುಗೆ ಅನಿಲ ಒದಗಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಅನಿಲ ಭಾಗ್ಯ ಯೋಜನೆ ಮಾತ್ರ ಹಳ್ಳ ಹಿಡಿದಿದ್ದು, ಅಡುಗೆ ಅನಿಲಕ್ಕಾಗಿ ಫಲಾನುಭವಿಗಳು ಕಾದು ಕುಳಿತಿದ್ದಾರೆ.

 

Leave a Reply

Your email address will not be published. Required fields are marked *

Back To Top