More

    33 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ

    ಶಿವಮೊಗ್ಗ: ಸ್ಮಾರ್ಟ್​ಸಿಟಿ ಯೋಜನೆಯಡಿ ಶಿವಮೊಗ್ಗದಲ್ಲಿ 33 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಕ್ರೀಡಾ ಸಂಕೀರ್ಣ ನಿರ್ವಿುಸಲು ಉದ್ದೇಶಿಸಿದ್ದು ಇದು ದೇಶದ ಮಾದರಿ ಕ್ರೀಡಾಂಗಣ ಆಗುವಂತೆ ನೋಡಿಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

    ಕ್ರೀಡಾ ಸಂಕೀರ್ಣ ನಿರ್ವಿುಸುವಲ್ಲಿ ಇರಬಹುದಾದ ಸಾಧಕ-ಬಾಧಕಗಳ ಬಗ್ಗೆ ಕ್ರೀಡಾಪಟುಗಳು ಮತ್ತು ತರಬೇತಿದಾರರಿಂದ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿ, ಪ್ರಸ್ತುತ ಬಹುತೇಕ ಕ್ರೀಡೆಗಳಿಗೆ ನೆಹರು ಕ್ರೀಡಾಂಗಣದಲ್ಲಿ ನಿರ್ವಿುಸುತ್ತಿರುವ ಸಂಕೀರ್ಣದಲ್ಲಿ ತಜ್ಞರು ಹಾಗೂ ಕ್ರೀಡಾಪಟುಗಳ ಅಭಿಪ್ರಾಯ ಪರಿಶೀಲಿಸಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳಲ್ಲಿ ನಿತ್ಯ ತರಬೇತಿ ಪಡೆಯುತ್ತಿರುವ ಹಾಗೂ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಕ್ರೀಡಾ ಸಂಕೀರ್ಣ ನಿರ್ವಿುಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ವಸತಿ, ಎಲ್ಲ ರೀತಿಯ ವಾಹನಗಳ ನಿಲುಗಡೆಗೆ ಅವಕಾಶ, ವಾಕಿಂಗ್​ಪಾಥ್ ಇರುವಂತೆ ವಿನ್ಯಾಸಗೊಳಿಸಲಾಗಿದೆ ಎಂದರು.

    ಡಿಸಿ ಕೆ.ಬಿ.ಶಿವಕುಮಾರ್ ಮಾತನಾಡಿ, ಒಂದೇ ಕ್ರೀಡಾಂಗಣದಲ್ಲಿ ಹಲವು ಕ್ರೀಡೆಗಳು ನಡೆಯುತ್ತಿದ್ದರೂ ಬೇರೆ ಕ್ರೀಡೆಗಳಿಗೆ ಯಾವುದೇ ಅಡಚಣೆ ಆಗದಂತೆ ಕ್ರಮ ವಹಿಸಲಾಗುವುದು ಎಂದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಇದ್ದರು.

    ಹಾಕಿಗೆ ಜಾಗ ಗುರುತಿಸಲು ಆಗ್ರಹ: ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಪರ್ಯಾಯವಾಗಿ ಸ್ಥಳ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ಕ್ರೀಡಾಳುಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳುವುದು ಬೇಡ. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶವಾಗುವಂತೆ ಕ್ರೀಡಾ ಸಮುಚ್ಛಯ ನಿರ್ವಣ, ಹಾಕಿ ಕ್ರೀಡೆಗೆ ಅನ್ಯ ಸ್ಥಳ ಗುರುತಿಸಬೇಕೆಂದು ವಿವಿಧ ಕ್ರೀಡಾಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts