More

    ಬೆಂಗಳೂರು ಕೃಷಿ ವಿವಿಯ 33 ಬೋಧಕ-ಬೋಧಕೇತರರಿಗೆ ನಾಳೆ ಪ್ರಶಸ್ತಿ ಪ್ರದಾನ

    ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 58ನೇ ಸಂಸ್ಥಾಪನಾ ದಿನಾಚರಣೆ ಗುರುವಾರ (ಅ.5) ವಿವಿ ಕ್ಯಾಂಪಸ್ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ನಡೆಯಲಿದೆ. ಈ ವೇಳೆ ಐಸಿಎಆರ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರವಾಗಿರುವ ವಿವಿಯ ತೋಟಗಾರಿಕೆ ವಿಭಾಗದ ಪ್ರಾಧ್ಯಾಪಕ ಡಾ. ಕೆ.ಎನ್.ಶ್ರೀನಿವಾಸಪ್ಪ ಅವರು ಸೇರಿದಂತೆ ಇನ್ನಿತರ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಸಮಾರಂಭದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೈದರಾಬಾದ್‌ನ ಅಂತಾರಾಷ್ಟ್ರೀಯ ಅರೆ-ಶುಷ್ಕ ಉಷ್ಣವಲಯ ಬೆಳೆಗಳ ಸಂಶೋಧನಾ ಸಂಸ್ಥೆಯ ನಿವೃತ್ತ ಉಪ ಮಹಾನಿರ್ದೇಶಕ ಡಾ. ಸಿ.ಎಲ್. ಲಕ್ಷ್ಮೀಪತಿ ಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ವಿವಿ ಕುಲಪತಿ ಡಾ. ಎಸ್.ವಿ.ಸುರೇಶ ತಿಳಿಸಿದ್ದಾರೆ.

    ಕೃಷಿ ಕಾಮಿರ್ಕರಿಗೆ ಪ್ರಶಸ್ತಿ:

    ವಿಶ್ವವಿದ್ಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವವರನ್ನು ಗೌರವಿಸುವ ನಿಟ್ಟಿನಲ್ಲಿ ಅತ್ಯುತ್ತಮ ಕೃಷಿ ಕಾರ್ಮಿಕ ಪ್ರಶಸ್ತಿಯು ಮೈಸೂರು ನಾಗನಹಳ್ಳಿಯ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಶಶಿಕಲಾ ಆಯ್ಕೆಯಾಗಿದ್ದಾರೆ.

    ಇದೇ ವೇಳೆ ಡಾ. ಕಾಳಯ್ಯ ಕೃಷ್ಣಮೂರ್ತಿ, ರಾಷ್ಟ್ರೀಯ ಅತ್ಯುತ್ತಮ ಕೃಷಿ ಸಂಶೋಧನಾ ಪ್ರಶಸ್ತಿ, ನಾಗಮ್ಮ ದತ್ತಾತ್ರೇಯ ರಾವ್ ಪ್ರಶಸ್ತಿ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಮೆ. ಜುವಾರಿ ಇಂಡಸ್ಟ್ರೀಸ್ ಲಿ. ಅತ್ಯುತ್ತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಅತ್ಯುತ್ತಮ ಸೇವಾ ಸಿಬ್ಬಂದಿ ಪ್ರಶಸ್ತಿ ಮತ್ತು ಕನ್ನಡ ಕೃಷಿ ಪುಸ್ತಕ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts