ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ದುರಂತ ಸಾವು!

sheep
Published on

ದಾವಣಗೆರೆ: ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ಮೃತಪಟ್ಟಿವೆ. ಈ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ.

ಅಡಿಕೆ ತೋಟದಲ್ಲಿ ಬೆಳೆದ ವಿಚಿತ್ರ ರೀತಿಯ ಹುಲ್ಲು ತಿಂದು ಕುರಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುರಿದಾಸರಹಳ್ಳಿ ನಿವಾಸಿ ಡಿ. ಮಂಜಪ್ಪ ಕುರಿಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ ಕುರಿಗಳು ಮೃತಪಟ್ಟಿವೆ. ಇನ್ನೂ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿವೆ. ಸಕಾಲಕ್ಕೆ ಪಶುವೈದ್ಯರಿಂದ ಚಿಕಿತ್ಸೆ ಸಿಕ್ಕಿದ್ದು ಪ್ರಾಣಾಪಾಯದಿಂದ ಕುರಿಗಳು ಪಾರಾಗಿವೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net