35 ಐಐಟಿ ವಿದ್ಯಾರ್ಥಿಗಳು ಸೇರಿ ಟ್ರೆಕ್ಕಿಂಗ್‌ಗೆ ತೆರಳಿದ್ದ 45 ಜನ ಕಣ್ಮರೆ

ನವದೆಹಲಿ: ಟ್ರೆಕ್ಕಿಂಗ್‌ಗೆ ತೆರಳಿದ್ದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) 35 ವಿದ್ಯಾರ್ಥಿಗಳೂ ಸೇರಿ ಒಟ್ಟಾರೆ 45 ಮಂದಿ ನಾಪತ್ತೆಯಾಗಿದ್ದಾರೆ.

ಹಿಮಾಚಲ ಪ್ರದೇಶದ ಲಹಾಲ್‌ ಮತ್ತು ಸ್ಪಿತಿ ಜಿಲ್ಲೆಯಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ವಿದ್ಯಾರ್ಥಿಗಳು ಈ ಪ್ರದೇಶದಲ್ಲಿ ಸಂಭವಿಸಿದ ಭಾರಿ ಹಿಮಪಾತದ ನಂತರ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಾಣೆಯಾದ ವಿದ್ಯಾರ್ಥಿಯೊಬ್ಬರ ತಂದೆ ರಾಜ್‌ವೀರ್‌ ಸಿಂಗ್‌ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳ ತಂಡವೊಂದು ಹ್ಯಾಂಪ್ಟಾ ಪಾಸ್‌ಗೆ ಟ್ರೆಕ್ಕಿಂಗ್‌ಗೆ ತೆರಳಿತ್ತು. ಅಲ್ಲಿಂದ ಅವರು ಪ್ರಸಿದ್ಧ ಪ್ರವಾಸಿ ಕೇಂದ್ರವಾದ ಮನಾಲಿಗೆ ತೆರಳಬೇಕಾಗಿತ್ತು. ಆದರೆ ಈವರೆಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ತಿಳಿದ್ದಾರೆ.

ಹಿಮಾಚಲ ಪ್ರದೇಶದ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಿಮಪಾತವು ಸಂಭವಿಸುತ್ತಿದೆ. ಕುಲ್ಲು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಈವರೆಗೂ ಕನಿಷ್ಠ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)