ಲಂಜ್, ಕಾಂಗ್ರಾ: ಫ್ರಧಾನಿ ನರೇಂದ್ರ ಮೋದಿ ಅವರ ಧರ್ಮಶಾಲಾ ರ್ಯಾಲಿಗೆ ತೆರಳುತ್ತಿದ್ದ ಖಾಸಗಿ ಶಾಲಾ ಬಸ್ ಕಂದಕಕ್ಕೆ ಬಿದ್ದು, ಕಂಪ್ಯೂಟರ್ ತರಬೇತಿ ಕೇಂದ್ರದ 35 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಧರ್ಮಶಾಲಾದಿಂದ 37 ಕಿ.ಮೀ. ದೂರದಲ್ಲಿರುವ ಕಾಂಗ್ರಾ ಜಿಲ್ಲೆಯ ಜವಾಲಿ ಬಳಿ ಘಟನೆ ನಡೆದಿದ್ದು, ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೋದಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ ಜನ್ ಆಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ತೆರಳುತ್ತಿದ್ದರು. (ಏಜೆನ್ಸೀಸ್)