More

    36 ಗಂಟೆ ದರ್ಶನ ನೀಡಿದ ಚೌಡೇಶ್ವರಿ

    ಮದ್ದೂರು: ವರ್ಷದಲ್ಲಿ ಕೇವಲ 36 ಗಂಟೆ ದರ್ಶನ ನೀಡಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಚೌಡೇಶ್ವರಿ ಅಮ್ಮನವರ ರಥೋತ್ಸವ ಮತ್ತು ಕೊಂಡೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು.


    ಶುಕ್ರವಾರ ಬೆಳಗ್ಗೆ 4.30ಕ್ಕೆ ಅಮ್ಮನವರ ಕೊಂಡೋತ್ಸವ, ಮಧ್ಯಾಹ್ನ 12 ಗಂಟೆಗೆ ನಡೆದ ಅಮ್ಮನವರ ರಥೋತ್ಸವಕ್ಕೆ ಜಿಲ್ಲೆ ಸೇರಿದಂತೆ ರಾಜ್ಯ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.


    ಗುರುವಾರ ಮಧ್ಯಾಹ್ನ 12ಗಂಟೆಗೆ ದೇವದ್ವಾರ ತೆರೆಯಲಾಗಿತ್ತು. ಶುಕ್ರವಾರ ರಾತ್ರಿ 10 ಗಂಟೆಗೆ ದೇವದ್ವಾರವನ್ನು ಮುಚ್ಚುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts