More

    ಶಿಬಿರದಲ್ಲಿ 36 ಮಂದಿಯಿಂದ ರಕ್ತದಾನ

    ಮಡಿಕೇರಿ: ಮಹಿಳೆಯರು ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗುವಂತೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಕುಶಾಲನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಎಲ್.ಉದಯಕುಮಾರ್ ಅಭಿಪ್ರಾಯಪಟ್ಟರು.


    ಕುಶಾಲನಗರದ ಶ್ರೀಕನ್ನಿಕಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಮತ್ತು ವಾಸವಿ ಯುವತಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.


    ತುರ್ತಾಗಿ ರಕ್ತ ಅಗತ್ಯವಿದ್ದವರಿಗೆ ಸಂಸ್ಕರಿಸಿರುವ ರಕ್ತವನ್ನು ಒದಗಿಸುವ ಶ್ರೇಷ್ಠ ಕೆಲಸವನ್ನು ರಾಷ್ಟ್ರೋತ್ಥಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
    ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್. ನಾಗೇಂದ್ರಪ್ರಸಾದ್ ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ಕೂಡ ರಕ್ತದಾನ ಮಾಡುವುದು ಒಳ್ಳೆಯದು ಎಂದರು.


    ಎಲ್ಲ ದಾನಗಳಿಗಿಂತ ಶ್ರೇಷ್ಠದಾನ ರಕ್ತದಾನ. ರಕ್ತದ ಕೊರತೆಯಿಂದ ಹಲವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ. ಈಗ ತಂತ್ರಜ್ಞಾನ ಉನ್ನತ ಮಟ್ಟದಲ್ಲಿ ಇರುವುದರಿಂದ ರಕ್ತವನ್ನು ಶೇಖರಿಸಿ, ಅವಶ್ಯಕವಿದ್ದಾಗ ನೀಡಿ ಜೀವ ರಕ್ಷಿಸುವ ಕೆಲಸವಾಗುತ್ತಿದೆ. ಅಂತಹ ನಿಸ್ವಾರ್ಥ ಸೇವೆ ಮಾಡುತ್ತಿರುವ ರಕ್ತದ ಬ್ಯಾಂಕ್‌ಗಳಿಗೆ ಸಾರ್ವಜನಿಕರು ಹೆಚ್ಚು ರಕ್ತ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಕಿವಿಮಾತು ಹೇಳಿದರು.

    ಬುಧವಾರ ಆಯೋಜನೆಗೊಂಡಿದ್ದ ಶಿಬಿರದಲ್ಲಿ 36 ಜನರು ರಕ್ತದಾನ ಮಾಡಿದರು. ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್, ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮೀ ಶ್ರೀನಿವಾಸ್, ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ.ಪ್ರವೀಣ್, ಪುರಸಭಾ ಸದಸ್ಯ ಬಿ.ಅಮೃತ್ ರಾಜ್, ಯುವತಿಯರ ಸಂಘದ ಕಾರ್ಯದರ್ಶಿ ಸ್ನೇಹಾ, ಖಜಾಂಚಿ ಭೂಮಿಕಾ, ರಾಷ್ಟ್ರೋತ್ಥಾನ ಸಂಸ್ಥೆಯ ಡಾ.ಕರಂಬಯ್ಯ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts