More

    ಬಿಸಿಯೂಟದಲ್ಲಿ ಹಲ್ಲಿ: 36 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಪಾಟ್ನಾ: ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಿ ಕನಿಷ್ಠ 35 ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಸರನ್ ಜಿಲ್ಲೆಯ ದುಂಡ್ರಿ ಟಿಕುರಿಯಾ ಗ್ರಾಮದಲ್ಲಿ ನಡೆದಿದೆ. ಮಧ್ಯಾಹ್ನದ ಊಟದ ಸಮಯದಲ್ಲಿ ಈ ಘಟನೆ ನಡೆದಿದ್ದು, ಊಟಕ್ಕೆ ಕುಳಿತ ವೇಳೆ ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿಯನ್ನು ಕಂಡ ಕೂಡಲೇ ಮಾಹಿತಿಯನ್ನು ಶಿಕ್ಷಕರಿಗೆ ತಿಳಿಸಿದ್ದಾನೆ.

    ಇದನ್ನೂ ಓದಿ: ಮರಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಹದಿನೈದರ ಬಾಲಕರಿಬ್ಬರ ಮರಣ

    ಈ ವೇಳೆ ಎಚ್ಚೆತ್ತ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಬಿಸಿಯೂಟವನ್ನು ಕೂಡಲೇ ನಿಲ್ಲಿಸಿ, ಗ್ರಾಮಸ್ಥರೊಂದಿಗೆ ಸೇರಿ ಶಾಲಾ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ವಿದ್ಯಾರ್ಥಿಗಳನ್ನು ಪರೀಕ್ಷಿಸಿದ ವೈದ್ಯಾಧಿಕಾರಿ ಪಂಕಜ್ ಕುಮಾರ್ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಕುರಿತು ಶಿಕ್ಷಕಿ ಸುಮನ್ ಕುಮಾರಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಸಂಜಯ್ ಕುಮಾರ್ ರೈ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮಧ್ಯಾಹ್ನದ ಊಟವನ್ನು ಸೇವಿಸಿದ ನಲವತ್ತು ವಿದ್ಯಾರ್ಥಿಗಳ ಪೈಕಿ 36 ಮಂದಿ ಅಸ್ವಸ್ಥರಾಗಿದ್ದರು. ವಿದ್ಯಾರ್ಥಿಗಳಿಗೆ ಆಹಾರವನ್ನು ಒದಗಿಸುವ ಉಸ್ತುವಾರಿ ಹೊಂದಿರುವ ಎನ್‌ಜಿಒ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts