More

    ಅಗ್ನಿಪಥ ವಿರುದ್ಧ ಭಾರಿ ಪ್ರತಿಭಟನೆ; ದೇಶಾದ್ಯಂತ 369 ರೈಲುಗಳು ರದ್ದು..

    ನವದೆಹಲಿ: ಅಗ್ನಿಪಥ ಯೋಜನೆ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ರೈಲು ರದ್ದು ಪ್ರಕ್ರಿಯೆ ಮುಂದುವರಿದಿದ್ದು, ಇಂದು ದೇಶದಲ್ಲಿ ಒಟ್ಟು 369 ರೈಲು ಸೇವೆಗಳನ್ನು ರದ್ದು ಮಾಡಲಾಗಿದೆ ಎಂಬುದಾಗಿ ಭಾರತೀಯ ರೈಲ್ವೆ ತಿಳಿಸಿದೆ.

    ಸೈನಿಕರನ್ನು ಮತ್ತು ಭದ್ರತಾ ಸಿಬ್ಬಂದಿ ನೇಮಕ ಸಲುವಾಗಿ ಕೇಂದ್ರ ಸರ್ಕಾರ ಕೈಗೊಳ್ಳಲು ಉದ್ದೇಶಿಸಲಾಗಿರುವ ಅಗ್ನಿಪಥ ಯೋಜನೆ ವಿರುದ್ಧ ಪ್ರತಿಪಕ್ಷಗಳು ತೀವ್ರ ಟೀಕೆ ಮಾಡಿದ್ದು, ಮತ್ತೊಂದೆಡೆ ದೇಶದ ಹಲವೆಡೆ ಭಾರಿ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವೆಡೆ ಇದು ಹಿಂಸಾಚಾರಕ್ಕೂ ತಿರುಗಿದೆ.

    ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ರೈಲ್ವೆ ಇಲಾಖೆ 369 ರೈಲುಗಳನ್ನು ರದ್ದುಗೊಳಿಸಿದೆ. ಈ ಪೈಕಿ 210 ಮೇಲ್​/ಎಕ್ಸ್​ಪ್ರೆಸ್​ ಹಾಗೂ 159 ಲೋಕಲ್ ಪ್ಯಾಸೆಂಜರ್ ರೈಲುಗಳಾಗಿವೆ. ಅಲ್ಲದೆ ಇನ್ನೂ ಎರಡು ಮೇಲ್​/ಎಕ್ಸ್​ಪ್ರೆಸ್​ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಒಟ್ಟು 371 ರೈಲುಗಳನ್ನು ರದ್ದು ಮಾಡಿದಂತಾಗಿದೆ.

    ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts