More

    ವಿಶ್ವದ 38 ದೇಶಗಳ ಅನಿವಾಸಿ ಕನ್ನಡಿಗರೊಂದಿಗೆ ಸಚಿವ ಸಿ.ಟಿ. ರವಿ ವಿಡಿಯೋ ಸಂವಾದ

    ಚಿಕ್ಕಮಗಳೂರು: ಕರೊನಾ ಸಂಬಂಧ ವಿದೇಶಗಳಲ್ಲಿರುವ ಕನ್ನಡಿಗರ ಸಮಸ್ಯೆ ಆಲಿಸಿ ಪರಿಹರಿಸಲು ರಾಜ್ಯದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ತಿಳಿಸಿದರು.

    ಅನಿವಾಸಿ ಭಾರತೀಯರ ಸಮಸ್ಯೆ ಆಲಿಸುವ ಉದ್ದೇಶದಿಂದ ಶನಿವಾರ ಅವರ ಗೃಹಕಚೇರಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಡೆಸಿದ ವಿಡಿಯೋ ಸಂವಾದದಲ್ಲಿ ಭರವಸೆ ನೀಡಿದರು. ಸ್ವಯಂ ಕ್ವಾರಂಟೈನ್​ನಲ್ಲಿರುವ ಅವರು ಮನೆಯಿಂದಲೇ ಸಂವಾದದಲ್ಲಿ ಭಾಗವಹಿಸಿದ್ದರು.

    ಸುಮಾರು 3 ಗಂಟೆಗಳ ಕಾಲ ನಡೆದ ಸಂವಾದದಲ್ಲಿ ವಿಶ್ವದ 38 ದೇಶಗಳ 125ಕ್ಕೂ ಹೆಚ್ಚು ಅನಿವಾಸಿ ಕನ್ನಡಿಗರು, ಕನ್ನಡ ಸಂಘಗಳ ಪ್ರತಿನಿಧಿಗಳು ಭಾಗವಹಿಸಿ ಕರೊನಾ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ಸಮಸ್ಯೆಗಳನ್ನು ವಿವರಿಸಿದರು.

    ಯುರೋಪ್, ಫ್ರಾನ್ಸ್, ದುಬೈ, ಸಿಂಗಾಪುರ, ಇಟಲಿ, ಅಮೆರಿಕಾ, ಆಸ್ಟ್ರೇಲಿಯಾ, ಈಜಿಪ್ಟ್, ಕೀನ್ಯಾ, ದುಬೈ, ಡೆನ್ಮಾರ್ಕ್ ಸೇರಿದಂತೆ 38 ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು, ಪ್ರವಾಸಿಗರು, ಹಾಗೂ ಅಲ್ಲಿನ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿದ್ದು ಸಂಬಳ ಕಡಿತದ ಜತೆಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿರುವ ಬಗ್ಗೆ ಮಾಹಿತಿ ಪಡೆದು ಇದನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಆತ್ಮವಿಶ್ವಾಸ ತುಂಬಿದರು.

    ವಿದೇಶಿ ಕನ್ನಡಿಗರ ಅಹವಾಲು ಆಲಿಸಿದ ಅವರು, ಸಮಸ್ಯೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಕ್ರಮ ವಹಿಸುವುದಾಗಿ ತಿಳಿಸಿರುವುದಾಗಿ ಹೇಳಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕಾರ್ಯದರ್ಶಿ, ಮುರಳೀಧರ್ ಸಂವಾದದಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts