

ಭೋಪಾಲ್: ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 39ಕ್ಕೂ ಹೆಚ್ಚು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತರು ಭೋಪಾಲ್ನಲ್ಲಿ ಸೋಮವಾರ ನಡೆಯುತ್ತಿರುವ ಕಾರ್ಯಕರ್ತ ಮಹಾಕುಂಭಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ. ಖಾರ್ಗೋನ್ ಜಿಲ್ಲೆಯ ಕಾಸರವಾಡ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜನಸಂಘದ ಸಹ ಸಂಸ್ಥಾಪಕ ದೀನ್ದಯಾಳ್ ಉಪಧ್ಯಾಯ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾರ್ಯಕರ್ತ ಮಹಾಕುಂಭವನ್ನು ಆಯೋಜಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಳೆದ 45ದಿನಗಳ ಅಂತರದಲ್ಲಿ ಪ್ರಧಾನಿ ಮೋದಿ ಮೂರನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಸಮಾವೇಶದಲ್ಲಿ ಸುಮಾರು 10ಲಕ್ಷ ಮಂದಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.