17 C
Bangalore
Monday, December 16, 2019

4.2 ಕೋಟಿ ವೆಚ್ಚದಲ್ಲಿ ಘಟಪ್ರಭಾ ರೈಲ್ವೆ ನಿಲ್ದಾಣ ಅಭಿವೃದ್ಧಿ

Latest News

ಸಾಹಿತ್ಯಕ್ಕೆ ಮೌಲಿಕ ಕೊಡುಗೆ ನೀಡಿದ ಪ್ರಾಧ್ಯಾಪಕ

ಧಾರವಾಡ: ಸಂ. ಶಿ. ಭೂಸನೂರಮಠ ಆದರ್ಶ ಪ್ರಾಧ್ಯಾಪಕರಾಗಿದ್ದರು. ಶರಣ ಸಂಸ್ಕೃತಿ ಅಳವಡಿಸಿಕೊಂಡು ಬದುಕಿದ್ದ ಅವರು, ಅನೇಕ ಮೌಲಿಕ ಗ್ರಂಥಗಳನ್ನು ಸಂಪಾದಿಸಿದ್ದಾರೆ ಎಂದು...

ಸಿದ್ದಿ ಜನಾಂಗದಿಂದ ಸಚಿವ ಪ್ರಲ್ಹಾದ ಜೋಶಿಗೆ ಸನ್ಮಾನ

ಹುಬ್ಬಳ್ಳಿ:ಕೇಂದ್ರ ಸರ್ಕಾರ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಸಿದ್ದಿ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್​ಟಿ) ಸೇರಿಸಿದ ಹಿನ್ನೆಲೆಯಲ್ಲಿ ಸಿದ್ದಿ ಬುಡಕಟ್ಟು ಭೂ ಹೋರಾಟ...

ಸರ್ಕಾರಿ ನೌಕರರ ಹಬ್ಬವಾಗಿ ಕ್ರೀಡಾಕೂಟ

ಧಾರವಾಡ: ರಾಜ್ಯದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿಯಲ್ಲಿ ನಗರದಲ್ಲಿ ಆಯೋಜಿಸುತ್ತಿದ್ದು, ಜಿಲ್ಲಾಡಳಿತ ಮತ್ತು ಜಿಪಂ ಸಹಕಾರದಲ್ಲಿ...

ಶುದ್ಧ ನೀರಿಗಾಗಿ ಹಳ್ಳಿಗರ ಅಲೆದಾಟ

ರಾಣೆಬೆನ್ನೂರ: ಜನರಿಗೆ ಶುದ್ಧ ನೀರು ಪೂರೈಸಲು ತಾಲೂಕಿನ ಬಹುತೇಕ ಗ್ರಾಮ, ತಾಂಡಾಗಳಲ್ಲಿ ಸ್ಥಾಪಿಸಿದ ಘಟಕಗಳು ಅಧಿಕಾರಿಗಳ ನಿಷ್ಕಾಳಜಿಯಿಂದ ಹಲವೆಡೆ ಸ್ಥಗಿತವಾಗಿವೆ. ಇದರಿಂದಾಗಿ ಹಳ್ಳಿಗರಿಗೆ...

ಸಾವಿರ ಕೋ.ರೂ. ಬಿಡುಗಡೆ

ನವಲಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ನವಲಗುಂದ...

ಘಟಪ್ರಭಾ: 80 ವರ್ಷಗಳ ಹಳೆಯ ಹಾಗೂ ಉತ್ತರ ಕರ್ನಾಟಕ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಒಂದಾದ ಘಟಪ್ರಭಾ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ 4.2 ಕೋಟಿ ವೆಚ್ಚದ ಕಾಮಗಾರಿಗೆ ಲೋಕಸಭೆ ಸದಸ್ಯ ಸುರೇಶ ಅಂಗಡಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.
ಪಾದಚಾರಿ ಮೇಲ್ಸೇತುವೆ ಹಾಗೂ ಹೊಸ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದರು, ಮಹತ್ವಾಕಾಂಕ್ಷಿ ಲೋಂಡಾ-ಮಿರಜ ರೈಲು ಜೋಡಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದ್ದು, 2021 ರ ವೇಳೆಗೆ ಪೂರ್ಣಗೊಳ್ಳಲಿದೆ. ಘಟಪ್ರಭಾ ನಿಲ್ದಾಣ ಸ್ವಚ್ಛತೆಯಲ್ಲಿ ತುಂಬ ಹಿಂದುಳಿದಿದೆ. ಪಟ್ಟಣ ಪಂಚಾಯಿತಿ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ರೈಲ್ವೆ ನಿಲ್ದಾಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಯೋಜನೆಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಒಳಮಾರ್ಗದ ರಸ್ತೆ ಹಾಗೂ ಮೇಲ್ಸೇತುವೆಯನ್ನು ನಿರ್ಮಿಸಲಾಗುವುದು. ತರಕಾರಿ ಸಾಗಣೆ ಹಾಗೂ ದಾಸ್ತಾನು ಕೈಗೊಳ್ಳಲು ಕೋಲ್ಡ್ ಸ್ಟೋರೇಜ್ ಮತ್ತು ಗೋಕಾಕ ರೋಡಿನಲ್ಲಿ ಸಕ್ಕರೆ ದಾಸ್ತಾನು ಮಾಡಲು ಒಂದು ಗುಡ್‌ಶೆಡ್ ನಿರ್ಮಾಣ ಮಾಡಲಾಗುವುದು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಕಾರ್ಮಿಕರು ಮತ್ತು ಹಮಾಲರಿಗೆ ಹೆಚ್ಚಿನ ಲಾಭ ದೊರಕುವಂತೆ ಮಾಡುತ್ತೇವೆ ಮತ್ತು ನಿಲ್ದಾಣದಲ್ಲಿ ಒಂದು ಉತ್ತಮ ಕ್ಯಾಂಟೀನ್ ಮಾಡುತ್ತೇವೆ ಎಂದು ಹೇಳಿದರು.

ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ್ ಮಾತನಾಡಿ, ಈ ನಿಲ್ದಾಣವು ಎನ್.ಎಸ್.ಜಿ 5ರ ವರ್ಗಕ್ಕೆ ಸೇರಿದೆ. ಪ್ರತಿನಿತ್ಯ 4.5 ಸಾವಿರ ಜನರು ನಿಲ್ದಾಣವನ್ನು ಒಳಸುತ್ತಾರೆ ಹಾಗೂ ಪ್ರತಿನಿತ್ಯ 2ಲಕ್ಷಕ್ಕೂ ಹೆಚ್ಚು ಆದಾಯ ಸಂಗ್ರಹವಾಗುತ್ತದೆ. ಘಟಪ್ರಭಾ ಸುತ್ತ-ಮುತ್ತ ಫಲವತ್ತಾದ ಪ್ರದೇಶ ಇರುವ ಕಾರಣ ಆಹಾರ ಧಾನ್ಯ ಹಾಗೂ ವ್ಯವಸಾಯೋತ್ಪನ್ನಗಳ ಮಾರುಕಟ್ಟೆಗೂ ಅನುಕೂಲವಾಗಿದೆ. ಉತ್ತರ ಕರ್ನಾಟಕವಲ್ಲದೆ ಮಹಾರಾಷ್ಟ್ರ,ಗೋವಾ ಹಾಗೂ ಇನ್ನಿತರ ರಾಜ್ಯಗಳಿಗೂ ಸಗಟು ತರಕಾರಿ ಮತ್ತು ಆಹಾರ ಧಾನ್ಯಗಳು ಸಾಗಣೆಯಾಗುತ್ತವೆ. ಹೊಸ ನಿಲ್ದಾಣದಿಂದ ಕಾರು, ಆಟೋರಿಕ್ಷಾ ಮತ್ತು ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ಇರುವ ಸರ್ಕ್ಯುಲೇಟಿಂಗ್ ವ್ಯವಸ್ಥೆ, ಎರಡು ಆರಕ್ಷಣೆರಹಿತ ಟಿಕೆಟ್ ಕೌಂಟರ್, ವಿಚಾರಣಾ ಕೌಂಟರ್, ಹವಾನಿಯಂತ್ರಣ ನಿರೀಕ್ಷಣೆ ಕೊಠಡಿ, ಮಹಿಳೆಯರ ಮತ್ತು ಪುರುಷರ ನಿಯಂತ್ರಣ ಕೊಠಡಿ, ವಿ.ಐ.ಪಿ.ಲಾಂಜ್, ವಿಶ್ರಾಂತಿ ಕೊಠಡಿಗಳು, ಫುಡ್ ಪ್ಲಾಜಾ ಹಾಗೂ 540 ಉದ್ದದ ಉನ್ನತ ಎತ್ತರದ 2ನೇ ಪ್ಲಾಟ್ ಫಾರಂ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

ಹುಬ್ಬಳಿ ರೈಲ್ವೆ ವಿಭಾಗದ ವ್ಯವಸ್ಥಾಪಕ ರಾಜೇಶ್ ಮೋಹನ , ಮುಖ್ಯ ಇಂಜಿನೀಯರಾದ ಪ್ರೇಮ ನಾರಾಯಣ ಹಾಗೂ ಉಪಪ್ರಧಾನ ವ್ಯವಸ್ಥಾಪಕ ಮತ್ತು ಮುಖ್ಯ ಸಾರ್ವಜನಿಕ ಅಧಿಕಾರಿ ಇ.ವಿಜಯ, ಅಶೋಕ ಪೂಜಾರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುಜಾತ ಪೂಜೇರಿ, ತಾ.ಪ.ಅಧ್ಯಕ್ಷೆ ಸುನಂದಾ ಕರದೇಸಾಯಿ ಹಾಜರಿದ್ದರು.
ಮಾಜಿ ಜಿ.ಪಂ ಅಧ್ಯಕ್ಷ ಈರಣ್ಣ ಕಡಾಡಿ, ಸುರೇಶ ಪಾಟೀಲ, ಸುರೇಶ ಕಾಡದವರ, ರಾಮಣ್ಣ ಹುಕ್ಕೇರಿ,. ಲಕ್ಷ್ಮಣ ತಪಸಿ, ಪ್ರವೀಣ ಚುನಮುರಿ, ಅಪ್ಪಯಪ್ಪಾ ಬಡಕುಂದ್ರಿ, ಭೀಮಪ್ಪಾ ಅಟ್ಟಿಮಿಟ್ಟಿ, ರಾಮಣ್ಣಾ ಹುಕ್ಕೇರಿ, ರಾಜು ಕತ್ತಿ, ಅರವಿಂದ ಬಡಕುಂದ್ರಿ, ಚಿದಾನಂದ ದೇಮಶೆಟ್ಟಿ, ಮಾರುತಿ ವಿಜಯನಗರ, ಉಮೇಶ ನಿರ್ವಾಣಿ, ಈರುಪಾಕ್ಷಿ ಯಲಿಗಾರ, ನಾಗಲಿಂಗ ಪೋತದಾರ, ಪ್ರಮೋದ ಜೋಶಿ ಶೇಖರ ರಜಪೂತ ಹಾಗೂ ರೈಲ್ವೆ ಅಧಿಕಾರಿಗಳು ಹಾಜರಿದ್ದರು. ವಿವಿಧ ಸಂಘಟನೆಗಳು ಹಾಗೂ ಶಾಲೆ ಮಕ್ಕಳು ಸಂಸದ ಸುರೇಶ ಅಂಗಡಿ ಅವರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದರು. ಅನೀಶ ಹೆಗಡೆ ನಿರೂಪಿಸಿ, ವಂದಿಸಿದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...