4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ರಾಣೆಬೆನ್ನೂರ: ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿದ ಖದೀಮರು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

ಹುಸೇನಸಾಬ ಬೀದರಿ ಎಂಬುವರ ಮನೆ ಕಳ್ಳತನವಾಗಿದೆ. ಇವರು ಕೊಟ್ಟೂರು ನಗರಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡು ದಿನದಿಂದ ಅನ್ಯ ಕೆಲಸದ ಮೇಲೆ ಬೇರೆ ಊರಿಗೆ ತೆರಳಿದ್ದರು. ಇದನ್ನು ಮನಗಂಡ ಕಳ್ಳರು ಮನೆಯ ಹಿಂಬದಿ ಬಾಗಿಲನ್ನು ಮುರಿದು ಒಳಗೆ ನುಗ್ಗಿ 15 ತೊಲೆ ಚಿನ್ನಾಭರಣ ಹಾಗೂ 6 ಸಾವಿರ ರೂ. ಮೌಲ್ಯದ ಕೈ ಗಡಿಯಾರ ದೋಚಿಕೊಂಡು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲಿಸಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *