More

    ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ಆರ್ಥಿಕ ನೆರವು ನೀಡಲು 4.82 ಕೋಟಿ ಮಂಜೂರು

    ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 482.85 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ಈ ಸಂಬಂಧ ಇಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು ರಾಜ್ಯದ 16095 ಬಡ ಕಲಾವಿದರು ಈ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.

    ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು,
    ಅರ್ಜಿ ಸಲ್ಲಿಸುವಲ್ಲಿ ಯಾವುದೇ ತೊಡಕು ಉಂಟಾದರೆ ಕೂಡಲೇ ಇದಕ್ಕಾಗಿಯೇ ಇರುವ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
    ಈ ಆರ್ಥಿಕ ನೆರವು ಪಡೆಯಲು ಮಾರ್ಗಸೂಚಿಯೊಂದನ್ನು ಸಿದ್ಧಪಡಿಸಲಾಗಿದೆ ಮಾರ್ಗಸೂಚಿಯ ಅನುಸಾರ ಅರ್ಹ ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದರು.

    ಪ್ರತಿ ಜಿಲ್ಲೆಯಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಒಳಗೊಂಡ ಐದು ಜನ ರ ಸಮಿತಿಯು ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸುತ್ತದೆ. ನಂತರ ಕೇಂದ್ರ ಕಚೇರಿಯಿಂದ ಕಲಾವಿದರ ಖಾತೆಗೆ ನೇರವಾಗಿ ಆರ್ ಟಿ ಜಿ ಎಸ್ ಮೂಲಕ ಪರಿಹಾರದ ಮೊತ್ತ ಜಮಾ ಆಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ .

    ಪತ್ರಿಕಾ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇದನ್ನೂ ಓದಿ; ಚುನಾವಣಾ ಫಲಿತಾಂಶದ ನಂತರ ಒಂದೇ ತಿಂಗಳಲ್ಲಿ 14 ಬಾರಿ ತೈಲ ದರ ಏರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts