ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ನಾಲ್ವರು ಮಕ್ಕಳು ಸೇರಿ ಒಂಬತ್ತು ಮಂದಿ ಮೃತ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ನಗರದ ಹೊರವಲಯದಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯುಂಟಾಗಿ ಸ್ಫೋಟಗೊಂಡಿದ್ದರಿಂದಾಗಿ ನಾಲ್ವರು ಮಕ್ಕಳು ಸೇರಿ ಒಟ್ಟು ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಜುಲೈ 20ರ ರಾತ್ರಿ ಈ ಘಟನೆ ಸಂಭವಿಸಿದೆ. ಮಧ್ಯ ಪ್ರದೇಶ ಗುಣ ಜಿಲ್ಲೆಯ ಮೂಲದ ಕುಟುಂಬವೊಂದು ಅಹಮದಾಬಾದ್ ನಗರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿತ್ತು, ಅಬರ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ಬೆಂಕಿ ಹತ್ತಿ ಉರಿದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿ ಒಟ್ಟು 10 ಮಂದಿ ಗಂಭೀರ ಗಾಯಾಳುಗಳಾಗಿದ್ದರು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ … Continue reading ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ನಾಲ್ವರು ಮಕ್ಕಳು ಸೇರಿ ಒಂಬತ್ತು ಮಂದಿ ಮೃತ