More

    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ನಾಲ್ವರು ಕಾರ್ಮಿಕರು ಸಾವು

    ಪಶ್ಚಿಮ ಬಂಗಾಳ: ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದ ಗಾರ್ಡನ್ ರೀಚ್​ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಲುಕಿರುವ ಸುಮಾರು 15 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವಶೇಷಗಳಡಿ ಸಿಲುಕಿರುವರನ್ನು ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ರಕ್ಷಿಸಲಾಗುತ್ತಿದೆ. ಇನ್ನೂ ಶೋಧಾ ಕಾರ್ಯ ಮುಂದುವರೆದಿದೆ.

    ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

    ನಗರದ ಗಾರ್ಡನ್​ ರೀಚ್​ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವು ಭಾನುವಾರ ತಡರಾತ್ರಿ ಕುಸಿದಿದೆ. ಇದರಿಂದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಮಹಿಳೆಯರಲ್ಲಿ ಒಬ್ಬ ಮಹಿಳೆಯನ್ನು ಸ್ಥಳೀಯ ನಿವಾಸಿ ಹಸೀನಾ ಬೀಬಿ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಮಾಹಿತಿ ಲಭ್ಯವಾಗಿಲ್ಲ.

    ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಮಮತಾ ಬ್ಯಾನರ್ಜಿ:  ಹಣೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಇತ್ತೀಚಗಷ್ಟೇ ಡಿಸ್ಚಾರ್ಜ್​ ಆಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
    ಕಟ್ಟಡ ನಿರ್ಮಾಣಕ್ಕೆ ಅಧಿಕೃತ ಅನುಮತಿ ಸಿಕ್ಕಿಲ್ಲ ಎಂದು ಅಧಿಕಾರಿಗಳು ಸಿಎಂ ಮಮತಾ ಅವರಿಗೆ ಮಾಹಿತಿ ನೀಡಿದ್ದಾರೆ.

    ಘಟನೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಮಮತಾ ಈ ಘಟನೆ ಕುರಿತ ಪ್ರಕರಣವನ್ನು ತನಿಖೆಗೆ ಆದೇಶ ನೀಡಲಾಗಿದೆ. ಈ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಘಟನೆಯಿಂದ ಕಟ್ಟಡದ ಹತ್ತಿರವಿದ್ದ ಇತರ ಮನೆಗಳಿಗೆ ಹಾನಿಯಾಗಿವೆ ಅವರಿಗೂ ಸರ್ಕಾರ ಸಹಾಯ ಮಾಡಲಿದೆ ಎಂದು ಭರವಸೆ ನೀಡಿದರು.

    ಮೃತರ ಕುಟುಂಬಕ್ಕೆ 5 ಲಕ್ಷ : ಈ ಕುರಿತು ಮಾತನಾಡಿದ ಸಚಿವ ಸುಜಿತ್ ಬೋಸ್, ಭಾನುವಾರ ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದ ಮೇಯರ್ ಫಿರ್ಹಾದ್ ಹಕೀಮ್, ಕಟ್ಟಡ ಅವಶೇಷಗಳಡಿ ಸಿಲುಕಿರುವರನ್ನು ಶೀಘ್ರದಲ್ಲೇ ರಕ್ಷಿಸಲಾಗುವುದು. ರಾಜ್ಯು ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ಹಾಗೂ ಗಾಯಗೊಂಡವರಿಗೆ 1 ಲಕ್ಷ ನೀಡುತ್ತೇವೆ. ಹದಿಮೂರು ಜನರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

    ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts