More

    ಚಾಲಕನ ನಿಯಂತ್ರಣ ತಪ್ಪಿ ಹಳಿ ಮೇಲೆ ಬಿದ್ದ ಬಸ್; ನಾಲ್ವರು ಸಾವು

    ಜೈಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರೈಲ್ವೇ ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.

    ಘಟನೆ ತಡರಾತ್ರಿ 2:15ರ ಸುಮಾರಿಗೆ ಸಂಭವಿಸಿದ್ದು, ಅಪಘಾತದಲ್ಲಿ 28ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜ್​ಕುಮಾರ್​ ಕಸ್ವಾ, ಹರಿದ್ವಾರದಿಂದ ರಾಜಸ್ಥಾನದ ದೌಸಾ ಕಡೆ ಬರುತ್ತಿದ್ದ ಬಸ್ಸಿನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 28ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ ರಾಜ್​ಕುಮಾರ್​ ಕಸ್ವಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts