More

    ತಿರುಪತಿ ದರ್ಶನಕ್ಕೆ ಹೊರಟ ಕಾರು ಅಪಘಾತ; ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ದುರ್ಮರಣ!

    ರಾಣೆಬೆನ್ನೂರು: ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದು, ಆರು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಹಲಗೇರಿ ಬೈಪಾಸ್ ಬಳಿ ಇಂದು ನಸುಕಿನ ಜಾವ ಸಂಭವಿಸಿದೆ.

    ಇದನ್ನೂ ಓದಿ: ನೀವು ಸಹ ಹೀಗೇನಾ? ನಿಮ್ಮಿಬ್ಬರಿಂದ ಇದನ್ನು ನಿರೀಕ್ಷಿಸಿರಲಿಲ್ಲ! ಸಿಎಸ್​ಕೆ ಆಟಗಾರರ ವಿರುದ್ಧ ಆರ್​ಸಿಬಿ ಫ್ಯಾನ್ಸ್​ ಕಿಡಿ

    ಹಾವೇರಿ ಅಶ್ವಿನಿ ನಗರದ ನಿವಾಸಿಗಳಾದ ಸುರೇಶ ವೀರಪ್ಪ ಜಾಡಿ, ಐಶ್ವರ್ಯ ಈರಪ್ಪ ಬಾರ್ಕಿ, ಚೇತನಾ ಸಮಂಗಡಿ, ಪ್ರಭುರಾಜ ಸಮಂಗಡಿ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಕಾರಿನಲ್ಲಿದ್ದ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ನೀಲಪ್ಪ ಬಾರ್ಕಿ, ಗೀತಾ ಹೊನ್ನಪ್ಪ ಬಾರ್ಕಿ ಎಂಬ ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇವರೆಲ್ಲರೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹಾವೇರಿಯಿಂದ ತೆರಳುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೆಬೆನ್ನೂರು ಸಂಚಾರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts