

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ.
ಬೊಕಾರೊ ಜಿಲ್ಲೆಯ ಪೆಟರ್ವಾರ್ ಬ್ಲಾಕ್ನ ಖೆಟ್ಕೊ ಎಂಬ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಮೊಹರಂ ಹಬ್ಬದ ಮೆರವಣಿಗೆ ವೇಳೆ ಕಬ್ಬಿಣದಿಂದ ಮಾಡಿದ ತಾಜಿಯಾವು 11 ಸಾವಿರ ವೋಲ್ಟೇಜ್ ಇರುವ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: VIDEO| ಚಿರತೆಯನ್ನು ಧೈರ್ಯವಾಗಿ ಹಿಮ್ಮೆಟ್ಟಿಸಿದ ಶ್ವಾನ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಘಟನೆಯು ಬೆಳಗ್ಗೆ 6 ಘಂಟೆ ಸುಮಾರಿಗೆ ಸಂಭವಿಸಿದ್ದು, 11 ಸಾವಿರ ವೋಲ್ಟೇಜ್ ಇರುವ ವಿದ್ಯುತ್ ತಂತಿಗೆ ಕಬ್ಬಿಣದಿಂದ ಮಾಡಿದ ತಾಜಿಯಾ ತಾಕಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಬೊಕಾರೊ ಥರ್ಮಲ್ ಡಿವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಮಾಹಿತಿ ನೀಡಿದ್ದಾರೆ.