VIDEO| ವೇಗವಾಗಿ ಬಂದು ಟ್ರಕ್ ಗುದ್ದಿದ ತೀವ್ರತೆಗೆ ಹತ್ತಾರು ಅಡಿ ಹಿಂದೆ ಸರಿದ ಬಸ್​​..

buland shahar
Published on

ಬುಲಂದ್‌ಶಹರ್: ಸರ್ಕಾರಿ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೃತರ ಗುರುತು ಪತ್ತೆಗೆ ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದ್ದು, ಕೊತ್ವಾಲಿ ದೇಹತ್ ಪ್ರದೇಶದ ಅಡೌಲಿ ಟ್ರಿಸೆಕ್ಷನ್ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ದೆಹಲಿಗೆ ತೆರಳುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಸ್‌ನ ಹಿಂದಿನ ಭಾಗಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, ಅದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಟ್ರಕ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇನ್ನು ಈ ಭೀಕರ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತವಾದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪೊಲೀಸರು, ಮೃತದೇಹಗಳನ್ನು ವಶಕ್ಕೆ ಪಡೆದು ಅಪಘಾತದಲ್ಲಿ ಗಾಯಗೊಂಡಿರುವ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net