ಲಾರಿ, ಕಾರಿನ ನಡುವೆ ಭೀಕರ ಅಪಘಾತ; 4 ಮಂದಿ ಸಾವು, ಇಬ್ಬರ ಸ್ಥಿತಿ ಗಂಭೀರ

Car Accident
Published on

ಲಖನೌ: ಉತ್ತರ ಪ್ರದೇಶದ ಇಟಾವಾದ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ದೆಹಲಿಯಿಂದ ಹಮೀರ್‌ಪಿರ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ಕುರಿತು ಮಾತನಾಡಿರುವ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯ ಶ್ಯಾಮ್​ ಪ್ರಸಾದ್​, ಇಟಾವಾಹ್‌ನ ಇಕ್ದಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಗುರುತನ್ನು ಪತ್ತೆಹಚ್ಚುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಚಾಲಕನಿಗೆ ನಿದ್ದೆಯಲ್ಲಿದ್ದ ಕಾರಣ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net