

ಮುಂಬೈ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200ಅಡಿ ಕಂದಕಕ್ಕೆ ಉರುಳಿದ ಪರಿಣಾಮ ತೆಲಂಗಾಣ ಮೂಲದ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಮರಾವತಿ-ಚಿಕಲ್ದಾರ ನಡುವಿನ ಮಡ್ಕಿ ಎಂಬ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದುರ್ದೈವಿಗಳು ತೆಲಂಗಾಣದ ಆದಿಲಾಬಾದ್ ನಿವಾಸಿಗಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಅಪಘಾತ ಬೆಳಗಿನ ಜಾವದಲ್ಲಿ ಸಂಭವಿಸಿದ್ದು, ದಟ್ಟ ಮಂಜಿನಿಂದಾಗಿ ಮುಂಬದಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ. 200ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಶೇಖ್ ಸಲ್ಮಾನ್ ಶೇಖ್ ಚಾಂದ್ (28), ಶಿವಕೃಷ್ಣ ಆಡಂಕಿ (30), ಲಕ್ಷ್ಮಣ್ ಗುಲ್ಲಿ (29), ವಾನಪ್ರತಿ ಕೋಟೇಶ್ವರ ರಾವ್ (27) ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೆ. ಶ್ಯಾಮಲಿಂಗ ರೆಡ್ಡಿ (29), ಯೋಗೇಶ್ ಯಾದವ್ (30), ಹರೀಶ್ ಮುಟ್ಟಿನೇನಿ (27, ಸುಮನ್ ಕತಿಕಾ (29) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ತೆಲಂಗಾಣದ ಆದಿಲಾಬಾದ್ ನಿವಾಸಿಗಳಾಗಿದ್ದು, ತೆಲಂಗಾಣ ಗ್ರಾಮೀಣ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.