More

    ಸಾಬೂನು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 4 ಮಂದಿ ದುರ್ಮರಣ

    ಲಖನೌ: ಸಾಬೂನು ಕಾರ್ಖಾನೆಯ ಬಾಯ್ಲರ್​ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮೀರತ್​ನಲ್ಲಿ ನಡೆದಿದೆ.

    ಸ್ಫೋಟದ ರಭಸಕ್ಕೆ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯುವ ವೇಳೆ ಮತ್ತೊಮದು ಸ್ಫೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಎನ್​ಡಿಆರ್​ಎಫ್​ ತಂಡವು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮೀರತ್ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರೋಹಿತ್​ ಸಿಂಗ್​ ಸಜ್ವಾನ್​, ಘಟನೆಯು ಮೀರತ್​ನ ಲೋಹಿಯಾ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲವು ವರ್ಷಗಳಿಂದ ಸಾಬೂನು ಕಾರ್ಖಾನೆಯನ್ನು ಅಕ್ರಮವಾಗಿ ವಸತಿ ಪ್ರದೇಶದಲ್ಲಿ ನಡೆಸಲಾಗುತ್ತಿದ್ದು, ಸರ್ಕಾರದಿಂದ ಯಾವುದೇ ಪರವಾನಗಿ ಪಡೆದಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    ಇದನ್ನೂ ಓದಿ: ಸನಾತನ ಹೇಳಿಕೆ; ಮದ್ರಾಸ್​ ಹೈಕೋರ್ಟ್​ನಲ್ಲಿ ತಮ್ಮ ಭಾಷಣವನ್ನು ಸಮರ್ಥಿಸಿಕೊಂಡ ಉದಯನಿಧಿ ಸ್ಟಾಲಿನ್

    ಸಂಜಯ್​ ಗುಪ್ತಾ ಎಂಬುವವರಿಗ ಈ ಕಟ್ಟಡ ಸೇರಿದ್ದು, ಅಲೋಕ್ ಗುಪ್ತಾ ಮತ್ತು ಗೌರವ್ ಗುಪ್ತಾ ಎಂಬುವವರು ಅಕ್ರಮವಾಗಿ ಸಾಬೂನು ಕಾರ್ಖಾನೆ ನಡೆಸುತ್ತಿದ್ದರು. ಕೆಮಿಕಲ್​ ತುಂಬಿದ್ದ ಬಾಯ್ಲರ್​ನಲ್ಲಿ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ. ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಐವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು ಮತ್ತಷ್ಟು ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಮೀರತ್ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರೋಹಿತ್​ ಸಿಂಗ್​ ಸಜ್ವಾನ್ ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು,​ ತನಿಖೆಗೆ ಆದೇಶಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್​ ಭೇಟಿ ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts