ಲಖನೌ: ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಉರುಳಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆ ಸಮಾಂರಭವನ್ನು ಮುಗಿಸಿಕೊಂಡು ಆಲಿಗಢದಿಂದ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಬಬ್ಲು (45), ಪೂನಂ (35), ಕಾವ್ಯ (03), ಭೂಮಿ (01) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಇಟಾವಾದ ಜಲೇಸಾರ್ ನಿವಾಸಿಗಳೆಂದು ತಿಳಿದು ಬಂದಿದ್ದು, ಆಲಿಗಢದಲ್ಲಿ ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್ ಆಗುತ್ತಿದ್ದರು. ನಸುಕಿನ ಜಾವ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ನಾಲೆಗೆ ಉರುಳಿ ದುರಂತ ಸಂಭವಿಸಿದೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಸ್ಥಳೀಯರ ಸಹಾಯದೊಂದಿಗೆ ಮೃತದೇಹಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಹತ್ತರಿಸ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದ ಎದುರು ಆಡುವುದು ನಮಗೆ… Champions Trophy ಹೊಸ್ತಿಲಲ್ಲೇ ಪಾಕ್ ಮಾಜಿ ನಾಯಕನ ಹೇಳಿಕೆ ವೈರಲ್