More

    4 ನಾಮಪತ್ರ ತಿರಸ್ಕೃತ; 25 ಕ್ರಮಬದ್ಧ

    ಧಾರವಾಡ: ಲೋಕಸಭೆ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಕಾರ್ಯ ಅಭ್ಯರ್ಥಿಗಳು ಮತ್ತು ಸೂಚಕರ ಸಮ್ಮುಖದಲ್ಲಿ ಶನಿವಾರ ನಡೆಯಿತು. ನಾಲ್ವರ ನಾಮಪತ್ರಗಳು ತಿರಸ್ಕೃತವಾಗಿದ್ದು, ೨೫ ಸ್ವೀಕೃತವಾಗಿವೆ ಎಂದು ಚುನಾವಣಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
    ಪ್ರಕಟಣೆ ನೀಡಿರುವ ಅವರು, ನಾಮಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸದ ಹಿನ್ನಲೆಯಲ್ಲಿ ರಾಷ್ಟಿçÃÃಯ ಜನ ಸಂಭಾವನಾ ಪಾರ್ಟಿಯ ನಾಗರಾಜ ಶ್ರೀಧರ ಶೇಟ್, ಬಹುಜನ ಸಮಾಜ ಪಕ್ಷದ ಶೋಭಾ ಬಳ್ಳಾರಿ, ರೈತ ಭಾರತ ಪಾರ್ಟಿಯ ಹೇಮರಾಜ ಬಡ್ನಿ ಹಾಗೂ ಪಕ್ಷೇತರ ಅಭ್ಯರ್ಥಿ ರಾಹುಲ್ ಗಾಂಽ ಎನ್. ಅವರ ನಾಮಪತ್ರಗಳು ತಿರಸ್ಕೃತವಾಗಿವೆ. ಶಿವಾನಂದ ಮುತ್ತಣ್ಣವರ ಅವರು ಭಾರತೀಯ ಜನತಾ ಪಕ್ಷದ ಹೆಸರಿನಲ್ಲಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದ್ದು, ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ವೀಣಾ ಜನಗಿ ಅವರು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಹೆಸರಿನಲ್ಲಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದ್ದು, ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ಕ್ಷೇತ್ರದ ಸಾಮಾನ್ಯ ವೀಕ್ಷಕ ಅಜಯ ಗುಪ್ತಾ, ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಮತ್ತು ಅಭ್ಯರ್ಥಿಗಳು, ಸೂಚಕರು ಉಪಸ್ಥಿತರಿದ್ದರು.

    ನಾಮಪತ್ರ ಹಿಂಡೆಯಲು ಅವಕಾಶ: ಏ. ೨೨ರ ಮಧ್ಯಾಹ್ನ ೩ ಗಂಟೆಯವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ನಾಮಪತ್ರ ಹಿಂಪಡೆಯುವ ಅವಽ ಮುಗಿದ ಮೇಲೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದು ಚುನಾವಣಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts