ಲಖನೌ: ನಿಂತಿದ್ದ ಬಸ್ಗೆ ಟೆಂಪೋ ಟ್ರಾವೆಲರ್ (TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ರಸ್ತೆಬದಿ ಕೆಟ್ಟು ನಿಂತಿದ್ದ ಬಸ್ಗೆ ಟೆಂಪೋ ಟ್ರಾವೆಲರ್ (TT) ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದು, ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.
#WATCH | Barabanki, UP | Four dead and several injured in an accident between a bus and tempo traveller on Purvanchal Expressway pic.twitter.com/pLiEv4wn3y
— ANI (@ANI) February 16, 2025
ಘಟನೆಯ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಕುಮಾರ್ ಸಿಂಗ್, ಛತ್ತೀಸ್ಗಢದಿಂದ ಅಯೋಧ್ಯೆಗೆ ತೆರಳುತ್ತಿದ್ದ ಬಸ್ಸೊಂದು ಕೆಟ್ಟಿ ರಸ್ತೆಬದಿ ನಿಂತಿತ್ತು. ವೇಗವಾಗಿ ಬಂದ ಟೆಂಪೋ ಟ್ರಾವೆಲರ್ (TT) ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.
ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ದೇವೇಗೌಡರು ಬಿಜೆಪಿ, ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ: CM Siddaramaiah
ಭಾರತವನ್ನು ಸೋಲಿಸುವುದಕ್ಕಿಂತ ನಮಗೆ… Champions Trophy ವಿಚಾರವಾಗಿ ಪಾಕ್ ಉಪನಾಯಕನ ಹೇಳಿಕೆ ವೈರಲ್