More

    ತಮಿಳುನಾಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ನಾಲ್ವರು ಪೊಲೀಸರ ಬಂಧನ..!

    ತಮಿಳುನಾಡಿನ ತಿರುಚ್ಚಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಇದೀಗ ಸಂತ್ರಸ್ತೆಯ ದೂರಿನ ನಂತರ ನಾಲ್ವರೂ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ.


    ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೊ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರ ವಿರುದ್ಧ ದೂರು ದಾಖಲಿಸಲಾಗಿದೆ. ನಾಲ್ವರು ಆರೋಪಿಗಳನ್ನು ಶಶಿಕುಮಾರ್, ಶಂಕರಪಾಂಡಿ, ಪ್ರಸಾದ್ ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ ಹುಡುಗಿ ತನ್ನ ಪುರುಷ ಸ್ನೇಹಿತನೊಬ್ಬನೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮದ್ಯ ಸೇವಿಸುತ್ತಿದ್ದ ನಾಲ್ವರು ಆರೋಪಿ ಪೊಲೀಸರು ಇಬ್ಬರನ್ನು ತಡೆದು ವಿಚಾರಣೆ ನಡೆಸಿದ್ದಾರೆ.


    ನಂತರದಲ್ಲಿ ಪೊಲೀಸರು ಹುಡುಗಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ. ಕುಡಿದ ಅಮಲಿನಲ್ಲಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳು ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.


    ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣದ ಕುರಿತಂತೆ ದೂರು ನೀಡಿದ ನೀಡಿದ ಬಾಲಕಿ, ಪೊಲೀಸ್ ಅಧಿಕಾರಿಗಳು ಹಲ್ಲೆ ಮಾಡಿದ್ದಾರೆ ಜತೆಗೆ ತಮ್ಮಗುರುತು ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts