

Reservation : ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ ಶೇ.4 ಪರ್ಸೆಂಟ್ ಮೀಸಲಾತಿ ಕಲ್ಪಿಸಿದ್ದ ಮಸೂದೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ರಾಷ್ಟ್ರಪತಿ ಒಪ್ಪಿಗಾಗಿ ಬುಧವಾರ ಕಳುಹಿಸಿಕೊಟ್ಟಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮುಗೆ ಕಳುಹಿಸಿದ ಪತ್ರದಲ್ಲಿ '' ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿ ನೀಡಲು ಅವಕಾಶವಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಂವಿಧಾನದ 14,15,16 ಅರ್ಟಿಕಲ್ ಉಲ್ಲೇಖಸಿ ನಿರಾಕರಣೆ ಮಾಡಿದೆ ಎಂದು ಕೆಲ ತೀರ್ಪುಗಳನ್ನು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ''.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾರ್ಚ್ 7ರಂದು ಮಂಡಿಸಿದ ಬಜೆಟ್ನಲ್ಲಿ ಮೀಸಲಾತಿ ನೀಡುವ ಬಗ್ಗೆ ಘೋಷಣೆ ಮಾಡಿದ್ದರು.
ವಿಪಕ್ಷಗಳ ವಿರೋಧದ ಮಧ್ಯೆ ಸರ್ಕಾರ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ಒಪ್ಪಿಗೆ ನೀಡಿತ್ತು. ಎರಡು ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮೀಸಲಾತಿ ಸಿಗಲಿದೆ.