More

    ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್​ ಅಧಿಕಾರಿ; ಆರೋಪಿ ಅರೆಸ್ಟ್

    ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ ಓರ್ವ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.

    ದೌಸಾದ ಲಾಲ್ಸೋಟ್​ ನಗರದಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿ ಭೂಪೇಂದ್ರ ಸಿಂಗ್​ನನ್ನು ವಶಕ್ಕೆ ಪಡೆದಿರುವ ಪೊಲೀಸರು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಎಸ್​ಪಿ ರಾಮಚಂದ್ರ ಸಿಂಗ್​ ನೆಹ್ರಾ, ಆರೋಪಿ ಸಬ್​ಇನ್ಸ್​ಪೆಕ್ಟರ್​ ಯಾರು ಇಲ್ಲದ ವೇಳೆ ಕೃತ್ಯ ಎಸಗಿದ್ದು, ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಸೇವೆಯಿಂದ ಅಮಾನತು ಮಡಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಎಸ್​ಪಿ ರಾಮಚಂದ್ರ ಸಿಂಗ್​ ನೆಹ್ರಾ ತಿಳಿಸಿದ್ದಾರೆ.

    ಇತ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಸಾವಿರಾರು ಮಂದಿ ಪೊಲೀಸ್​ ಠಾಣೆಯ ಮುಂಭಾಗ ಜಮಾಯಿಸಿದ್ದು, ಆರೋಪಿ ಸಬ್​ ಇನ್ಸ್​ಪೆಕ್ಟರ್​ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಆರೋಪಿಯನ್ನು ಸ್ಥಳೀಯರು ಮನಬಂದಂತೆ ಥಳಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ: ಆನೆದಂತ, ಶ್ರೀಗಂಧ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳ ಅಕ್ರಮ ಸಂಗ್ರಹ; ಇಬ್ಬರು ಅರೆಸ್ಟ್​

    ಮುಂದಿನ ಕೆಲವು ದಿನಗಳಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ದೌರ್ಜನ್ಯ ಪ್ರಕರಣವು ಆಡಳಿತರೂಢ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅಶೋಕ್ ಗೆಹ್ಲೋಟ್ ಸರ್ಕಾರದ ಅದಕ್ಷತೆಯಿಂದಾಗಿ ನಿರಂಕುಶಾಧಿಕಾರಿಗಳಾಗಿರುವ ಪೊಲೀಸರು ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲೂ ದೌರ್ಜನ್ಯ ಎಸಗಲು ಹಿಂಜರಿಯುತ್ತಿಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

    ಆರೋಪಿ, ಎಎಸ್‌ಐ ಭೂಪೇಂದ್ರ ಸಿಂಗ್ ವಿರುದ್ಧ ಈಗಾಗಲೇ ಹಲವು ಆರೋಪಗಳು ಕೇಳಿ ಬಂದಿದ್ದು, ಈತನ ವಿರುದ್ಧ ಗೆಹ್ಲೋಟ್​ ಸರ್ಕಾರ ಯಾವುದೇ ಕ್ರಮವನ್ನು ಜರುಗಿಸದೆ ಬಿಟ್ಟಿದ್ದಕ್ಕೆ ಇಂದು ಈ ರಿತಿಯಾಗಿದೆ. ಆತನನ್ನು ಕೂಡಲೇ ಸೇವೆಯಿಂದ ವಜಾ ಮಾಡಿ ಸಂತ್ರಸ್ತರ ಕುಟುಂಬಕ್ಕೆ ನೆರವಾಗಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts