

ಬೆಂಗಳೂರು: 40% ಕಮಿಷನ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೆ, ತನಿಖೆ ಮಾಡಿದರೆ ತಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕಾಂಗ್ರೆಸ್ನವರು ಒಂದುವರೆ ವರ್ಷದಿಂದ ಆರೋಪ ಮಾಡುತ್ತಿದೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ಫೈನ್ ಸ್ಪೀಡ್ ಲಿಮಿಟ್!
ಪ್ರಸ್ತುತ ಸರ್ಕಾರವು ನಿಜವಾಗಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ, 2013 ರಿಂದ 2023ರವರೆಗಿನ ಎಲ್ಲ ಪ್ರಕರಣಗಳು ಬಗ್ಗೆ ತನಿಖೆ ಮಾಡಬೇಕು ಕೇವಲ ಸೆಲೆಕ್ವಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ? ಯಾರು ಯಾರು ತಪ್ಪಿತಸ್ಥರು ಇದ್ದಾರೆ ಅವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ದದ ೪೦% ಕಮಿಷನ್ ಕುರಿತಾದ ಪ್ರಕರಣಗಳು ಲೋಕಾಯುಕ್ತಾದಲ್ಲಿವೆ. ಇವುಗಳನ್ನು ತನಿಖೆಯನ್ನು ನಡೆಸಲಿ, ಗುತ್ತಿಗೆದಾರದ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ದ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇನ್ನೂ ಅದಕ್ಕೆ ಅವರು ದಾಖಲೆಯಾಗಲಿ, ಉತ್ತರವಾಗಲಿ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.(ಏಜೆನ್ಸೀಸ್)