ಸಂಭ್ರಮದ ಸಾವು: ಮದುವೆ ಸಮಾರಂಭದಲ್ಲಿ ಕುಣಿಯುತ್ತ ಕುಣಿಯುತ್ತ ಕುಸಿದು ಬಿದ್ದು ಪ್ರಾಣ ಕಳ್ಕೊಂಡ!

ನವದೆಹಲಿ: ರಾಜ್ಯ ಮಾತ್ರವಲ್ಲ ದೇಶಾದ್ಯಂತ ಹೃದಯಾಘಾತಕ್ಕೀಡಾಗಿ ಸಾಯುತ್ತಿರುವ ಪ್ರಕರಣಗಳು ಸಂಭವಿಸುತ್ತಿವೆ. ಇತ್ತೀಚೆಗಷ್ಟೇ ಉಡುಪಿಯಲ್ಲಿ ಯುವತಿಯೊಬ್ಬಳು ಸಮಾರಂಭವೊಂದರಲ್ಲಿ ಹೆಜ್ಜೆ ಹಾಕುತ್ತಲೇ ಕುಸಿದು ಬಿದ್ದು ಸಾವಿಗೀಡಾಗಿದ್ದಳು. ಆ ಮೂಲಕ ಅಂದಿನ ಸಂಭ್ರಮಕ್ಕೂ ಸಾವಿನ ಸೂತಕ ಆವರಿಸಿತ್ತು. ಅಂಥದ್ದೇ ಇನ್ನೊಂದು ಪ್ರಕರಣ ವರದಿಯಾಗಿದೆ. ಮನೋಜ್ ವಿಶ್ವಕರ್ಮ (40) ಎಂಬಾತ ಮದುವೆ ಸಮಾರಂಭವೊಂದರಲ್ಲಿ ಖುಷಿಯಿಂದ ಕುಣಿಯುತ್ತಲೇ ಕುಸಿದು ಬಿದ್ದ ಪ್ರಕರಣವೊಂದು ನಡೆದಿದೆ. ಈ ಕುರಿತ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಪಿಪ್ಲಾನಿ ಕತ್ರ ಎಂಬಲ್ಲಿ ಈ ಘಟನೆ ನಡೆದಿದೆ. … Continue reading ಸಂಭ್ರಮದ ಸಾವು: ಮದುವೆ ಸಮಾರಂಭದಲ್ಲಿ ಕುಣಿಯುತ್ತ ಕುಣಿಯುತ್ತ ಕುಸಿದು ಬಿದ್ದು ಪ್ರಾಣ ಕಳ್ಕೊಂಡ!