40ರ ಅಂಟಿ 16 ವರ್ಷದ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ! ಮುಂದೇನಾಯ್ತು?

dk - 2025-07-02T140734.662
Published on

ಮುಂಬೈ: ಮಹಿಳೆಯರ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುವ ಈ ಸಮಯದಲ್ಲಿ, ಇತ್ತೀಚೆಗೆ ಎಲ್ಲರನ್ನೂ ಬೆಚ್ಚಿಬೀಳಿಸುವ ಘಟನೆಯೊಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಮುಂಬೈನ 40 ವರ್ಷದ ಮಹಿಳಾ ಶಿಕ್ಷಕಿಯೊಬ್ಬರು ತಮ್ಮ 16 ವರ್ಷದ ವಿದ್ಯಾರ್ಥಿಗೆ (ಆತಂಕ ನಿವಾರಕ ಔಷಧಿಗಳನ್ನು ನೀಡಿ) ಒಂದು ವರ್ಷದಿಂದ ದೌರ್ಜನ್ಯ ಎಸಗುತ್ತಿದ್ದಾರೆ. ಈ ವಿಷಯ ಬೆಳಕಿಗೆ ಬಂದ ತಕ್ಷಣ, ಪೊಲೀಸರು ಮಹಿಳಾ ಶಿಕ್ಷಕಿಯನ್ನು ಬಂಧಿಸಿದ್ದಾರೆ.

ಆಕೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, ಬಾಲಾಪರಾಧಿ ನ್ಯಾಯ (ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅಪರಾಧಗಳ ಆರೋಪ ಹೊರಿಸಲಾಗಿದೆ.

ಆರೋಪಿ, ಇಂಗ್ಲಿಷ್ ಶಿಕ್ಷಕಿ, 11 ನೇ ತರಗತಿಯಲ್ಲಿದ್ದಾಗ ಆಕೆ ಬಾಲಕನಿಗೆ ಪಾಠ ಮಾಡಿದ್ದಳು. 2023 ರ ಡಿಸೆಂಬರ್‌ನಲ್ಲಿ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಾನು ವಿದ್ಯಾರ್ಥಿಯತ್ತ ಆಕರ್ಷಿತಳಾಗಿದ್ದೆ ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ.

2024ರ ಜನವರಿಯಿಂದ ತಾನು ವಿದ್ಯಾರ್ಥಿಯೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾಗಿ ಆಕೆ ಬಹಿರಂಗಪಡಿಸಿದ್ದಾಳೆ. ಮೊದಲು ಬಾಲಕನನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ನಂತರ ಆತಂಕ ನಿವಾರಕ ಔಷಧಿ ನೀಡಿ ಅವನನ್ನು ಶರಣಾಗುವಂತೆ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net