21.7 C
Bengaluru
Tuesday, January 21, 2020

400 ಹಾಸಿಗೆ ಆಸ್ಪತ್ರೆಗೆ ಯೋಜನೆ ಸಿದ್ಧ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಕಾರವಾರ

ಅಂತೂ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕನಸು ನನಸಾಗುವ ದಿನ ಹತ್ತಿರ ಬಂದಿದೆ. ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜ್ (ಕ್ರಿಮ್್ಸ) ಜತೆ ಅಂಕೋಲಜಿ, ಟ್ರಾಮಾ ಕೇರ್ ಹಾಗೂ 400 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ವಣಕ್ಕೆ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ.

ಕಳೆದ ಬಜೆಟ್​ನಲ್ಲಿ ರಾಜ್ಯ ಸರ್ಕಾರ ಆಸ್ಪತ್ರೆಗೆ 150 ಕೋಟಿ ರೂ. ಮೀಸಲಿಟ್ಟಿತ್ತು. ಯಡಿಯೂರಪ್ಪ ಸರ್ಕಾರದ ಕ್ಯಾಬಿನೆಟ್ ಕೆಲ ತಿಂಗಳ ಹಿಂದೆ 10 ಕೋಟಿ ರೂ. ಅನುದಾನ ಹೆಚ್ಚಿಸಿ, 160 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಆರೋಗ್ಯ ಇಲಾಖೆ ಮೂಲಸೌಕರ್ಯ ಹಾಗೂ ನಿರ್ಮಾಣ ವಿಭಾಗ ಈ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದೆ. 2020ರ ಜನವರಿ ವೇಳೆಗೆ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಏನೇನು ಸೌಲಭ್ಯ?: ಒಟ್ಟು 4 ಮಹಡಿಗಳ 2.60 ಲಕ್ಷ ಚದರ ಅಡಿ ವ್ಯಾಪ್ತಿಯಷ್ಟು ನೂತನ ಆಸ್ಪತ್ರೆ ನಿರ್ವಣವಾಗಲಿದೆ. ಅಲ್ಲದೆ, ಎರಡು ಹೆಚ್ಚುವರಿ ಮಹಡಿಗಳನ್ನು ಕಟ್ಟಲು ಅವಕಾಶ ಕಲ್ಪಿಸಲಾಗಿದೆ. ನೆಲ ಮಹಡಿಯಲ್ಲಿ ತುರ್ತು ಚಿಕಿತ್ಸಾ ಘಟಕ, ಟ್ರಾಮಾ ಕೇರ್ ಹಾಗೂ ಐಸಿಯು ಮೊದಲ ಮಹಡಿಯಲ್ಲಿ ಹೆರಿಗೆ ವಿಭಾಗ, ಮಕ್ಕಳ ವಿಶೇಷ ನಿಗಾ ಘಟಕ, ಎರಡನೇ ಮಹಡಿಯಲ್ಲಿ ವಾರ್ಡ್​ಗಳು ಹಾಗೂ ಐಸಿಸಿಯು ಮತ್ತು ಐಸಿಯುಗಳು ಇರಲಿವೆ. ಮೂರನೇ ಮಹಡಿಯಲ್ಲಿ ಶಸ್ತ್ರ ಚಿಕಿತ್ಸಾ ವಾರ್ಡ್​ಗಳು, ಬಿಐಸಿಯು ಮತ್ತು ಎಸ್​ಐಸಿಯು, ನಾಲ್ಕನೇ ಮಹಡಿಯಲ್ಲಿ ಶಸ್ತ್ರ ಚಿಕಿತ್ಸಾ ಕಾಂಪ್ಲೆಕ್ಸ್​ಗಳು, ಅಥೋ ಹಾಗೂ ತುರ್ತು ಶಸ್ತ್ರ ಚಿಕಿತ್ಸಾ ಕೊಠಡಿಗಳನ್ನು ನಿರ್ವಿುಸಲು ಯೋಜಿಸಲಾಗಿದೆ.

ಜಾಗದ್ದೇ ಸಮಸ್ಯೆ
ಮೆಡಿಕಲ್ ಕಾಲೇಜ್​ಗಾಗಿ ಜಿಲ್ಲಾ ಕಾರಾಗೃಹ ಸ್ಥಳಾಂತರ ಯೋಜನೆ ಸಿದ್ಧವಾಗಿದೆ. 2018ರ ಬಜೆಟ್​ನಲ್ಲೇ ಇದಕ್ಕೆ ಹಣ ಮಂಜೂರಾಗಿದ್ದು, ಅಂಕೋಲಾ ತಾಲೂಕಿನಲ್ಲಿ ಜೈಲು ನಿರ್ವಣಕ್ಕೆ ಯೋಜನೆಯೂ ರೂಪುಗೊಂಡಿದೆ. ಜೈಲನ್ನು ಸ್ಥಳಾಂತರ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಪತ್ರ ನೀಡಿದ್ದಾರೆ. ಆದರೆ, ಕಾರಾಗೃಹ ಇಲಾಖೆ ಇದಕ್ಕೆ ಕಾಲಾವಕಾಶ ಕೇಳಿದೆ. ಇದರಿಂದ ಜೈಲಿನಲ್ಲಿ ಖಾಲಿ ಇರುವ ಜಾಗ ಹಾಗೂ ಮೆಡಿಕಲ್ ಕಾಲೇಜ್​ನ ಖಾಲಿ ಜಾಗದಲ್ಲಿ ಸದ್ಯ 400 ಹಾಸಿಗೆಗಳ ಆಸ್ಪತ್ರೆ ನಿರ್ವಣಕ್ಕೆ ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೈಲು ಸ್ಥಳಾಂತರ ವಿಷಯವಾಗಿಯೂ ಪ್ರಯತ್ನ ಮುಂದುವರಿದಿದ್ದು, ಶೀಘ್ರ ಆದೇಶವಾಗಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಮಾಹಿತಿ ನೀಡಿದ್ದಾರೆ.

ಕಟ್ಟಡ ಅನಿವಾರ್ಯ
ಮೆಡಿಕಲ್ ಕಾಲೇಜ್​ನಲ್ಲಿ ಎಂಬಿಬಿಎಸ್ ತರಗತಿ ನಡೆಸಲು ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಅನುಮತಿ ಮುಂದುವರಿಸಲು ಪ್ರಮುಖವಾಗಿ 700 ಹಾಸಿಗೆಗಳ ಆಸ್ಪತ್ರೆ ವ್ಯವಸ್ಥೆ ಬೇಕು. ಶೀಘ್ರದಲ್ಲಿ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭವಾದಲ್ಲಿ ಮಾತ್ರ 2020ಕ್ಕೆ ಎಂಸಿಐ ಅನುಮತಿ ಮುಂದುವರಿಯಲಿದೆ ಎನ್ನಲಾಗಿದೆ. ಹೀಗಾಗಿ, ಶಾಸಕಿ ರೂಪಾಲಿ ನಾಯ್ಕ ಈ ನಿಟ್ಟಿನಲ್ಲಿ ಹಣ ಮಂಜೂರು ಮಾಡಲು ಸಾಕಷ್ಟು ಪ್ರಯತ್ನ ನಡೆಸಿದ್ದರು.

ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಯೋಜನೆಗೆ ಪರಿಶೀಲಿಸಿ ಒಪ್ಪಿಗೆ ನೀಡಿದ್ದೇವೆ. ಆರೋಗ್ಯ ಇಲಾಖೆ ಮೂಲ ಸೌಕರ್ಯ ವಿಭಾಗಕ್ಕೇ ಹಣ ಮಂಜೂರಾಗಲಿದ್ದು, ಅವರೇ ಕಾಮಗಾರಿ ನಿರ್ವಹಿಸಲಿದ್ದಾರೆ. ಸದ್ಯ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.
| ಡಾ. ಶಿವಾನಂದ ದೊಡ್ಮನಿ ಕ್ರಿಮ್ಸ್ ನಿರ್ದೇಶಕ

ಸುಭಾಸ ಧೂಪದಹೊಂಡ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...