More

    4000ಕ್ಕೂ ಅಧಿಕ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಾಟ

    ಸೊರಬ: ದೇಶದ ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರ ಧ್ವಜವನ್ನು ಗೌರವಿಸುವ ಮೂಲಕ, ಪ್ರತಿ ಮನೆಯಲ್ಲೂ ಧ್ವಜ ಹಾರಿಸುವಂತೆ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದರು.
    ಮಂಗಳವಾರ ಪಟ್ಟಣದಲ್ಲಿ ರೋಟರಿ ಕ್ಲಬ್ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ನಮ್ಮ ಬಾವುಟ ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವು ರಾಷ್ಟೀಯ ಧ್ವಜ ನೀತಿಯನ್ನು ತಿದ್ದುಪಡಿ ತಂದಿದ್ದು ಮೂರು ದಿನಗಳ ಕಾಲ ಮನೆ ಮನೆಗಳ ಮೇಲೆ ಧ್ವಜ ಹಾರಿಸಲಾಗುವುದು. ಜಿಪಂನಿಂದ ಜಿಲ್ಲೆಯ 4,619 ಕಚೇರಿಗಳನ್ನು ರಾಷ್ಟ್ರಧ್ವಜ ಹಾರಾಟ ಮಾಡಲು ಗುರುತು ಪಡಿಸಲಾಗಿದೆ. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ 87 ಸಾವಿರ ಧ್ವಜಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು. ಇದೇ ಸಂದರ್ಭದಲ್ಲಿ 30 ಯೋಧರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts