ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ

alok kumar ips
Published on

ಉಡುಪಿ: ಮಾದಕ ವಸ್ತು ಸೇವಿಸುತ್ತಿದ್ದ ಮಣಿಪಾಲ ವಿವಿಯ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಅಮಾನತಾದ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ತರಗತಿಗೆ ಹಾಜರಾಗುವಂತಿಲ್ಲ ಹಾಗೂ ವಿಶ್ವ ವಿದ್ಯಾಲಯಕ್ಕೆ ಸೇರಿದ ಯಾವುದೇ ಸೌಲಭ್ಯಗಳನ್ನು ಬಳಸುವಂತಿಲ್ಲ ಎಂದು ವಿವಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಹಲವು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್​ಗಳನ್ನ ವಶಕ್ಕೆ ತೆಗೆದುಕೊಂಡಿದ್ದು, ಅವರಿಂದ ಗ್ರಾಹಕರು ಯಾರು ಎನ್ನುವುದು ಪತ್ತೆ ಮಾಡಲು ಸಾಧ್ಯವಾಗಿದೆ. ಮಾಹೆ ವಿಶ್ವ ವಿದ್ಯಾಲಯದ ಕೆಲ ವಿದ್ಯಾರ್ಥಿಗಳು ಡ್ರಗ್ ಪೆಡ್ಲಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಂದ ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರ್ಪಡೆ ಕಾರ್ಯಕ್ರಮದಿಂದ ದೂರ ಉಳಿದ ಅನಂತ್ ನಾಗ್; ಕುತೂಹಲ ಕೆರಳಿಸಿದ ಮುಂದಿನ ನಡೆ

ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಇಲಾಖೆಯಿಂದ ವಿವಿಗೆ ಮಾಹಿತಿ ನೀಡಿದ್ದೆವು. ಬಳಿಕ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿಗಳನ್ನು ಪತ್ತೆ ಮಾಡಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೆವು. ಆರೋಪ ಸಾಬೀತಾಗಿರುವ ಪ್ರಕರಣಗಳ ವಿವರ ನೀಡಿದಾಗ ಮಣಿಪಾಲ ವಿವಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಹೀಗಾಗಿ 42 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಇಂತಹ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿ ನಿರ್ಲಕ್ಷ್ಯ ವಹಿಸುವುದಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ. ಇದನ್ನೂ ಓದಿ: ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ; ಬಜೆಟ್​ನಲ್ಲಿ ಘೋಷಿಸಿದ್ದ ಯೋಜನೆ ತಿದ್ದುಪಡಿ ಮಾಡಿದ ಸಿಎಂ

ಪೆಡ್ಲರ್​ಗಳ ವಿರುದ್ಧ ಪೋಲಿಸ್ ಇಲಾಖೆ ಕ್ರಿಮಿನಲ್ ಕೇಸ್ ದಾಖಲಿಸುತ್ತದೆ. ಎಡಿಜಿಪಿ ಅಲೋಕ್ ಕುಮಾರ್ ಅವರ ಸೂಚನೆಯ ಮೇರೆಗೆ ಈ ಕ್ರಮ ತೆಗದುಕೊಂಡಿದ್ದೇವೆ.. ಮಂಗಳೂರಿನಲ್ಲಿ ವೈದ್ಯರ ಮಾದಕ ಸೇವನೆ ಪ್ರಕರಣ ಬೆಳಕಿಗೆ ಬಂದ ನಂತರ ಗಂಭೀರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net