22.5 C
Bengaluru
Sunday, January 19, 2020

ದೆಹಲಿ ಅಗ್ನಿ ದುರಂತ: ಸಿಎಂ ಕೇಜ್ರಿವಾಲ್​ರಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ, ಕೇಂದ್ರದಿಂದ 2 ಲಕ್ಷ ರೂ., ತನಿಖೆಗೆ ಆದೇಶ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ದೆಹಲಿಯ ಅನಜ್​ ಮಂಡಿ ಏರಿಯಾದ ರಾಣಿ ಝಾನ್ಸಿ ರಸ್ತೆಯಲ್ಲಿನ ಲಗ್ಗೇಜ್​ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ತಲಾ 10 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ.

ಬೆಳಗ್ಗೆ 5 ಗಂಟೆ ಸಮಯದಲ್ಲಿ ಕಾರ್ಮಿಕರು ಸುಖನಿದ್ರೆಯಲ್ಲಿದ್ದ ಸಮಯದಲ್ಲಿ ದುರಂತ ಸಂಭವಿಸಿ, ಒಟ್ಟು 43 ಮಂದಿ ಕಾರ್ಮಿಕರು ಮೃತರಾಗಿದ್ದಾರೆ. ಹಲವರನ್ನು ರಕ್ಷಿಸಲಾಗಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಕೇಂದ್ರ ಸರ್ಕಾರ 50,000 ಮತ್ತು ಸಿಎಂ ಕೇಜ್ರಿವಾಲ್​ 1 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಜ್ರಿವಾಲ್​ ಪರಿಶೀಲನೆ ನಡೆಸಿ ಪರಿಹಾರವನ್ನು ಘೋಷಿಸಿದರು. ಅಲ್ಲದೆ, ಇದೇ ವೇಳೆ ಪ್ರಕರಣವನ್ನು ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿ, 7 ದಿನಗಳ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು ಇದೊಂದು ದುಃಖಕರ ಘಟನೆ. ಎಲ್ಲರಿಗೂ ಅಗತ್ಯ ನೆರವು ಕಲ್ಪಿಸುವುದಾಗಿ ಹೇಳಿ, ಮೃತರ ಸಾವಿಗೆ ಸಂತಾಪ ಸೂಚಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾರ್ಖಾನೆ ಮಾಲೀಕನ ವಿರುದ್ಧ ದೆಹಲಿ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅತ್ತ ಘಟನೆ ನಡೆಯುತ್ತಲೇ ಕಾರ್ಖಾನೆ ಮಾಲೀಕ ಪರಾರಿಯಾಗಿದ್ದಾನೆ. ಕಾರ್ಖಾನೆ ಇದ್ದ ಏರಿಯಾವು ತುಂಬಾ ಕಿರಿದಾಗಿದ್ದಲ್ಲದೆ, ಹಲವು ಸಣ್ಣ ತಯಾರಿಕಾ ಮತ್ತು ಸಂಗ್ರಹ ಘಟಕಗಳಿದ್ದವು. ಬೆಂಕಿ ಹೊತ್ತಿಕೊಂಡ ಬಳಿಕ ದಟ್ಟ ಹೊಗೆ ಎಲ್ಲೆಡೆ ಪಸರಿಸಿ ಮೃತರಲ್ಲಿ ಸಾಕಷ್ಟು ಮಂದಿ ಮಲಗಿದ್ದಾಗಲೇ ಉಸಿರಾಟದ ತೊಂದರೆಯಿಂದ ಪ್ರಾಣ ಕಳೆದುಕೊಂಡಿದ್ದಾರೆಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಾಥಮಿಕ ತನಿಖೆಯ ಪ್ರಕಾರ ಬೆಂಕಿಗೆ ಶಾರ್ಟ್​ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದೆ.​ ಸ್ಥಳದಲ್ಲಿ ಸಾಕಷ್ಟು ಪ್ಲಾಸ್ಟಿಕ್​ ಪದಾರ್ಥಗಳು ಇದ್ದುದ್ದರಿಂದ ಬೆಂಕಿಯ ಕೆನ್ನಾಲಿಗೆ ಪಸರಿಸಿ ಅದರಿಂದ ದಟ್ಟ ಹೊಗೆ ಆವರಿಸಿ ಉಸಿರಾಟದ ತೊಂದರೆಯಿಂದ ಸಾಕಷ್ಟು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹಲವರನ್ನು ಎಲ್​ಎನ್​ಜೆಪಿ ಮತ್ತು ಲೇಡಿ ಹಾರ್ಡಿಂಗೆ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...