17.8 C
Bengaluru
Wednesday, January 22, 2020

ದೆಹಲಿ ಅಗ್ನಿ ದುರಂತ ಪ್ರಕರಣ: ಸಾವಿನ ಸಂಖ್ಯೆ 43ಕ್ಕೆ ಏರಿಕೆ, ಹಲವರ ರಕ್ಷಣೆ, ಸ್ಥಳಕ್ಕೆ ಧಾವಿಸಿದ ಸಚಿವರು

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆ ದೆಹಲಿಯ ಅನಜ್​​ ಮಂಡಿ ಏರಿಯಾದ ರಾಣಿ ಝಾನ್ಸಿ ರಸ್ತೆಯಲ್ಲಿನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿದೆ. ಘಟನೆಯಲ್ಲಿ ಅನೇಕ ಮಂದಿಯನ್ನು ರಕ್ಷಣಾ ತಂಡ ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಪ್ರಾರಂಭದಲ್ಲಿ 10 ಮಂದಿ ಮೃತರಾಗಿರುವುದಾಗಿ ವರದಿಯಾಗಿತ್ತು. ಬಳಿಕ ಸಾವಿನ ಸಂಖ್ಯೆ 32ಕ್ಕೆ, ತದನಂತರ 35ಕ್ಕೆ ಏರಿಕೆಯಾಗಿ ಇದೀಗ ಅವಘಡದಲ್ಲಿ 43 ಮಂದಿ ಅಸುನೀಗಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಜತೆ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈವರೆಗೂ 11 ಮಂದಿಯನ್ನು ರಕ್ಷಿಸಲಾಗಿದ್ದು, 15 ಅಗ್ನಿಶಾಮಕ ವಾಹನದ ಸ್ಥಳದಲ್ಲೇ ಬೀಡುಬಿಟ್ಟಿದೆ.

ಸ್ಥಳದಲ್ಲಿ ಬೆಂಕಿಯ ಜ್ವಾಲೆಯನ್ನು ಸಂಪೂರ್ಣ ನಂದಿಸಲಾಗಿದ್ದು, ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ. ದಟ್ಟ ಹೊಗೆಯಿಂದ ಉಸಿರಾಡಲಾಗದೇ ಸಾಕಷ್ಟು ಮಂದಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಹಾಗೂ ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯರು ಮತ್ತು ಸಂಬಂಧಿಕರು ಧಾವಿಸಿದ್ದು, ಸಾಕಷ್ಟು ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಆಸ್ಪತ್ರೆಗೂ ಧಾವಿಸಿದ ಸಂಬಂಧಿಕರು ತಮ್ಮ ಕುಟಂಬದ ಸದಸ್ಯರನ್ನು ಪತ್ತೆಹಚ್ಚುವಲ್ಲಿ ಪರಾದಾಡಿದರು. ಈ ವೇಳೆ ಕೆಲವರು ಗಾಯಾಳುಗಳನ್ನು ಸಂಬಂಧಿಕರನ್ನು ಕರೆದೊಯ್ದರು. ಇನ್ನು ಕೆಲವರು ಮೃತದೇಹಗಳನ್ನು ಅಂತ್ಯ ಸಂಸ್ಕಾರಕ್ಕಾಗಿ ಕೊಂಡೊಯ್ದರು ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಟ್ಟಡದಲ್ಲಿ ವಿವಿಧ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತಂಗಿದ್ದರು ಎನ್ನಲಾಗಿದೆ. ಕಟ್ಟಡದ ಮಾಲೀಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ ಮತ್ತು ಸಿಎಂ ಅರವಿಂದ್​ ಕೇಜ್ರಿವಾಲ್ ಸೇರಿದಂತೆ ಸಾಕಷ್ಟು ನಾಯಕರು ಧಾವಿಸಿದ್ದಾರೆ.

ಘಟನೆಯ ಬಗ್ಗೆ ಲೋಕನಾಯಕ್​ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕಿಶೋರ್​ ಸಿಂಗ್​ ಮಾತನಾಡಿ, ಆಸ್ಪತ್ರೆಗೆ ಕರೆತಂದವರಲ್ಲಿ 34 ಮಂದಿ ಸಾವಿಗಿಡಾಗಿದ್ದಾರೆ. ಗಾಯಗೊಂಡವರು ಸ್ಥಿತಿ ಗಂಭೀರವಾಗಿಲ್ಲ. ಅವರನ್ನು ವೈದ್ಯಕೀಯ ತಪಾಸಣೆಯಲ್ಲಿಡಲಾಗಿದೆ. ದಟ್ಟೆ ಹೊಗೆ ಆವರಿಸಿ ಉಸಿರಾಟಕ್ಕೆ ತೊಂದರೆಯಾಗಿ ಬಹುತೇಕರು ಸಾವಿಗಿಡಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುಮಾರು 5 ಗಂಟೆಯಲ್ಲಿ ಅನಜ್​ ಮಂಡಿಯ ರಾಣಿ ಝಾನ್ಸಿ ರಸ್ತೆಯಲ್ಲಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಳಿಕ 5.22ಕ್ಕೆ ಕರೆ ಸ್ವೀಕರಿಸಿದ ಅಗ್ನಿಶಾಮಕ ದಳ ತಕ್ಷಣ 30 ಅಗ್ನಿ ನಂದಿಸುವ ವಾಹನದೊಂದಿಗೆ ಸ್ಥಳಕ್ಕೆ ದೌಡಾಯಿಸಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇನ್ನು ರಕ್ಷಣಾ ಕಾರ್ಯ ಸ್ಥಳದಲ್ಲಿ ನಡೆಯುತ್ತಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...